ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪವನ್ ಕಲ್ಯಾಣ್  ಆಕ್ಷೇಪ:  ನಟನ ವಿರುದ್ದ ಆಕ್ರೋಶ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್​​ ಕಲ್ಯಾಣ್​​ ಹೇಳಿದ್ಧಾರೆ.
ಪವನ್ ಕಲ್ಯಾಣ್
ಪವನ್ ಕಲ್ಯಾಣ್

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ವಿಚಾರಕ್ಕೆ ನನ್ನ ಸಹಮತ ಇಲ್ಲ ಎಂದು ಪವನ್​​ ಕಲ್ಯಾಣ್​​ ಹೇಳಿದ್ಧಾರೆ.

ಜನಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತಾಡುವ ವೇಳೆ ನಟ ಪವನ್​​ ಕಲ್ಯಾಣ್​​ ಈ ರೀತಿ ಹೇಳಿಕೆ ನೀಡಿದ್ದಾರೆ.

ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅಪರಾದಿಗಳಿಕೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಹಾಗಾಗಿ ಅತ್ಯಾಚಾರಿಗಳಿಗೆ ಮರಣದಂಡನೆ ಬದಲಿಗೆ ಸಿಂಗಾಪುರ ಮಾದರಿಯಲ್ಲಿ ಶಿಕ್ಷೆ ನೀಡಬೇಕು ಎಂದರು.

ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಇದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯಾಗಿದೆ ತಕ್ಷಣ ಕ್ಷಮೆಯಾಚಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

ಈ ಬಗ್ಗೆ ವೈಎಸ್‍ಆರ್ ಕಾಂಗ್ರೆಸ್ ಸಂಸದ ವಿಜಯ್ ಸಾಯ್ ರೆಡ್ಡಿ ಪ್ರತಿಕ್ರಿಯಿಸಿ, ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶವೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದರು. 

ಈ ಬೆನ್ನಲ್ಲೇ ಆಂಧ್ರ ಪ್ರದೇಶ ಸಚಿವರು ಕೂಡ ಪವನ್ ಕಲ್ಯಾಣ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವೆ ಪವನ್ ಕಲ್ಯಾಣ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com