ಉನ್ನಾವ್ ಸಾಮೂಹಿಕ ಅತ್ಯಾಚಾರ: ಕೋರ್ಟ್ ಗೆ ಆಗಮಿಸುವಾಗ ಸಂತ್ರಸ್ತೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಉನ್ನಾವ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದದೆ.

Published: 05th December 2019 12:44 PM  |   Last Updated: 05th December 2019 12:44 PM   |  A+A-


Rape Survivor Set On Fire

ಸಂತ್ರಸ್ತೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Posted By : Srinivasamurthy VN
Source : PTI

ಲಖನೌ: ಉನ್ನಾವ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದದೆ.

ಗುರುವಾರ ಬೆಳಗ್ಗೆ ನ್ಯಾಯಾಲಯದ ವಿಚಾರಣೆಗಾಗಿ ಸಂತ್ರಸ್ತೆ ಬರುತ್ತಿದ್ದ ವೇಳೆ ಆಕೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.  ರಾಯ್‌ಬರೇಲಿಗೆ ಬರುವುದಕ್ಕಾಗಿ ಮುಂಜಾನೆ 4.30ಕ್ಕೆ ಬೈಸ್ವಾರಾ ಬಿಹಾರ್ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಗೌರಾ ಕ್ರಾಸಿಂಗ್‌ ನಲ್ಲಿ ದುಷ್ಕರ್ಮಿಗಳು ಆಕೆಯನ್ನು ತಡೆದಿದ್ದಾರೆ. ಬಳಿಕ ಎಲ್ಲರೂ ನೋಡುತ್ತಿದ್ದಂತೆಯೇ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಕೂಡಲೇ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು  ವೈದ್ಯರು ಹೇಳಿದ್ದಾರೆ.

ಇನ್ನು ಸಂತ್ರಸ್ತೆಯ ಹೇಳಿಕೆ ಪ್ರಕಾರ 6 ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ತಲೆಗೆ ಹೊಡಿದು, ಕತ್ತಿಯಿಂದ ಕುತ್ತಿಗೆಗೆ ಇರಿದಿದ್ದಾರೆ. ಆಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಹರಿಶಂಕರ್ ತ್ರಿವೇದಿ, ಕಿಶೋರ್, ಶುಭಂ, ಶಿವಂ, ಉಮೇಶ್ ಮತ್ತು ಇಬ್ಬರು ತನ್ನ ಮೇಲೆ ದಾಳಿ ನಡೆಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದು, ಇದರಲ್ಲಿ ಇಬ್ಬರು ಅತ್ಯಾಚಾರ  ಪ್ರಕರಣದ ಆರೋಪಿಗಳಾಗಿದ್ದಾರೆ.

ಈ ವೇಳೆ ಅಲ್ಲಿದ್ದ ಜನರು ಸಂತ್ರಸ್ತೆಯ ರಕ್ಷಣೆಗಾಗಿ ಓಡಿ ಬಂದಾಗ ದುರ್ಷರ್ಮಿಗಳು ಓಡಿ ಹೋಗಿದ್ದಾರೆ.  ಸ್ಥಳೀಯರು 112 ಸಂಖ್ಯೆಗೆ ತುರ್ತು ಕರೆ ಮಾಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 5 ಮಂದಿಯ ವಿರುದ್ಧ ಸಂತ್ರಸ್ತೆ  ದೂರು ನೀಡಿದ್ದು ಇದರಲ್ಲಿ ಮೂವರನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಉನ್ನಾವ್ ಎಸ್‌ಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರದ ಬಗ್ಗೆ ಸಂತ್ರಸ್ತೆ ಮಾರ್ಚ್ ತಿಂಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ. ಸಂತ್ರಸ್ತೆಗೆ ಬೆಂಕಿ  ಹಚ್ಚಿದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp