ಇನ್ನೇನು ತಿನ್ನುತ್ತಾರೆ? ಬೆಣ್ಣೆ ಹಣ್ಣು ತಿನ್ನುತ್ತಾರೆಯೇ?: ನಿರ್ಮಲಾ ಸೀತಾರಾಮನ್'ಗೆ ಚಿದಂಬರಂ 

ಈರುಳ್ಳಿಯಲ್ಲದೆ ಮತ್ತೇನನ್ನು ತಿನ್ನುತ್ತಾರೆ? ಬೆಣ್ಣೆಹಣ್ಣು ತಿನ್ನುತ್ತಾರೆಯೇ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಗುರುವಾರ ಪ್ರಶ್ನಿಸಿದ್ದಾರೆ. 

Published: 05th December 2019 01:14 PM  |   Last Updated: 05th December 2019 01:14 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಈರುಳ್ಳಿಯಲ್ಲದೆ ಮತ್ತೇನನ್ನು ತಿನ್ನುತ್ತಾರೆ? ಬೆಣ್ಣೆಹಣ್ಣು ತಿನ್ನುತ್ತಾರೆಯೇ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಗುರುವಾರ ಪ್ರಶ್ನಿಸಿದ್ದಾರೆ. 

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇರೆಗೆ ಹೊರ ಬಂದಿರುವ ಚಿದಂಬರಂ ಅವರು, ಈರುಳ್ಳಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದರೊಂದಿಗೆ ಜೊತೆಗೂಡಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈರುಳ್ಳಿಯಲ್ಲದೆ ಮತ್ತೇನನ್ನು ತಿನ್ನುತ್ತಾರೆ? ಬೆಣ್ಣೆ ಹಣ್ಣು ತಿನ್ನುತ್ತಾರೆಯೇ ಎಂದು ಕೇಳಿದ್ದಾರೆ. 

ಈ ಹಿಂದೆ ಸಂಸತ್ತಿನಲ್ಲಿ ಮಾತನಾಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಮ್ಮ ಮನೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ತಿನ್ನುವುದಿಲ್ಲ, ನಾನು ಈರುಳ್ಳಿ, ಬೆಳ್ಳುಳ್ಳಿ ತಿನ್ನದ ಕುಟುಂಬಕ್ಕೆ ಸೇರಿದವಳು, ಹೀಗಾಗಿ ಬೆಲೆ ಏರಿಕೆಯ ಚಿಂತೆಯಿಲ್ಲ ಎಂದು ಹೇಳಿದ್ದರು. ನಿರ್ಮಲಾ ಸೀತಾರಾಮನ್ ಅವರು ನೀಡಿರುವ ಈ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. 

Stay up to date on all the latest ರಾಷ್ಟ್ರೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp