ಪಂಜಾಬ್: ಶಾಲೆ ಬಳಿ ಮಗಳ ಮುಂದೆಯೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ

ಶಿಕ್ಷಕಿಯನ್ನು ಆಕೆಯ ಮಗಳ ಮುಂದೆಯೇ ಶಾಲೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮೊಹಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಂಡೀಗಢ: ಶಿಕ್ಷಕಿಯನ್ನು ಆಕೆಯ ಮಗಳ ಮುಂದೆಯೇ ಶಾಲೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮೊಹಾಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರ ತಿಳಿಸಿದ್ದಾರೆ.

ಸರಬಜಿತ್ ಕೌರ್ ಎಂಬ ಶಿಕ್ಷಕಿ ತನ್ನ ಐದು ವರ್ಷದ ಮಗಳೊಂದಿಗೆ ಸ್ಕೂಟರ್ ನಲ್ಲಿ ಶಾಲೆಗೆ ಆಗಮಿಸಿ ಪಾರ್ಕಿಂಗ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಶಿಕ್ಷಕಿ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ತನ್ನ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದು, ಸ್ಥಳದಿಂದ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಬಾಲಕಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಾಲಿ ಜಿಲ್ಲೆಯ ಖರಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com