ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು: ರಾಷ್ಟ್ರಪತಿ

ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಹೇಳಿದ್ದಾರೆ.

Published: 06th December 2019 08:48 PM  |   Last Updated: 06th December 2019 08:48 PM   |  A+A-


Ram Nath Kovind

ರಾಮನಾಥ್ ಕೋವಿಂದ್

Posted By : Lingaraj Badiger
Source : UNI

ನವದೆಹಲಿ: ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ರಾಜಸ್ಥಾನದ ಸಿರೋಹಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ದೇಶದಲ್ಲಿ ಮಹಿಳೆಯರ ಸುರಕ್ಷೆ ಗಂಭೀರ ವಿಷಯವಾಗಿದೆ. ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಗುರಿಯಾದ ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶವೇ ಕೊಡಬಾರದು ಮತ್ತು ಕ್ಷಮಾದಾನದ ಅರ್ಜಿಗಳನ್ನು ಸಂಸತ್ತು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಗೃಹ ಸಚಿವಾಲಯ, ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಇಂದು ಶಿಫಾರಸು ಮಾಡಿದೆ.

2012ರ ಡಿಸೆಂಬರ್ 16ರಂದು ರಾತ್ರಿ ವೇಳೆ ತನ್ನ ಸ್ನೇಹಿತನೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿಯ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಒಟ್ಟು ಆರು ಮಂದಿ ಅತ್ಯಂತ ಕ್ರೂರ ಹಾಗೂ ಅಮಾನುಷವಾಗಿ ಅತ್ಯಾಚಾರವೆಸಗಿದ್ದರು. ಇದನ್ನು ತಡೆಯಲು ಬಂದ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಮೃಗೀಯವಾಗಿ ಅತ್ಯಾಚಾವೆಗಿದ್ದ ಅಪರಾಧಿಗಳು ಯುವತಿಯನ್ನು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆಸೆದಿದ್ದರು. ಈ ಘೋರ ಕೃತ್ಯದಿಂದ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಡಿ. 29ರಂದು ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ಈ ಆರು ಮಂದಿ ಅಪರಾಧಿಗಳಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಕೇಸ್​ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇನ್ನುಳಿದ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲದೇ ಈ ಆದೇಶವನ್ನು ದೆಹಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿತ್ತು.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp