ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ನಿರಾಕರಣೆ
ಮೇವು ಹಗರಣದಲ್ಲಿ ಡುಮ್ಕ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿದೆ.
Published: 06th December 2019 07:43 PM | Last Updated: 06th December 2019 07:43 PM | A+A A-

ಲಾಲು ಪ್ರಸಾದ್ ಯಾದವ್
ರಾಂಚಿ: ಮೇವು ಹಗರಣದಲ್ಲಿ ಡುಮ್ಕ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿದೆ.
ಲಾಲು ಯಾದವ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶ ಅಪ್ರೇಶ್ ಕುಮಾರ್ ಸಿಂಗ್ ತಿರಸ್ಕರಿಸಿದ್ದಾರೆ. ಈ ಪ್ರಕರಣದಲ್ಲಿ ಲಾಲು ಯಾದವ್ ಅವರು ಶಿಕ್ಷೆಯ ಒಟ್ಟು ಅವಧಿಯಲ್ಲಿ ಅರ್ಧವನ್ನೂ ಪೂರೈಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲಎಂದು ನ್ಯಾಯಾಧೀಶ ಸಿಂಗ್ ಹೇಳಿದ್ದಾರೆ.
ಡುಮ್ಕಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 2. 7 ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದು, ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು. ನಾಲ್ಕು ಬಹುಕೋಟಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿದ್ದಾರೆ.
ಆದಾಗ್ಯೂ, ನಾಲ್ಕು ಪ್ರಕರಣದ ಪೈಕಿ ಒಂದರಲ್ಲಿ ಅವರಿಗೆ ಜಾಮೀನು ನೀಡಲಾಗಿದೆ. ಅನಾರೋಗ್ಯದ ನೆಲೆಯಲ್ಲಿ ಎರಡನೇ ಮೇವು ಹಗರಣದಲ್ಲಿ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಸ್ತತ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಲಾಲು ಪ್ರಸಾದ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾಲು ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಪಶುಸಂಗೋಪನಾ ಇಲಾಖೆಯಲ್ಲಿ 900 ಕೋಟಿ ಮೊತ್ತದ ಮೇವು ಹಗರಣ ನಡೆದಿತ್ತು.