ವಿದರ್ಭ ನೀರಾವರಿ ಹಗರಣ: ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್ ​​ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಪ್ರಕರಣದ ಕುರಿತಂತೆ ಬಾಂಬೆ ಹೈಕೋರ್ಟ್​ನಲ್ಲಿರುವ ನಾಗಪುರ ನ್ಯಾಯಪೀಠಕ್ಕೆ ಮಹಾರಾಷ್ಟ್ರ ಎಸಿಬಿ ಅಫಿಡವಿಟ್ ಸಲ್ಲಿಸಿದ್ದು, ವಿದರ್ಭ ಪ್ರದೇಶದಲ್ಲಿ ನಡೆದಿರುವ ನೀರಾವರಿ ಹಗರಣಗಳಲ್ಲಿ ಅಜಿತ್​ ಪವಾರ್ ಪಾತ್ರವಿಲ್ಲ ಎಂದು ಅಫಿಡವಿಟ್​​ನಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ ಎನ್ನಲಾಗಿದೆ.

ಅಜಿತ್ ಪವಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಹಾರಾಷ್ಟ್ರದ ಅತ್ಯಂತ ಬರಪೀಡಿತ ಪ್ರದೇಶವಾದ ವಿದರ್ಬದಲ್ಲಿ ಹಲವು ನೀರಾವರಿ ಯೋಜನೆಗಳು ಜಾರಿಯಾಗಿದ್ದವು. ಅವುಗಳಲ್ಲಿ ಅಜಿತ್ ಪವಾರ್ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿ ಎಸಿಬಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್ನು ಈ ಹಿಂದಿನ ವಿಚಾರಣೆಯಲ್ಲಿ ಕೋರ್ಟ್ ಪ್ರಕರಣದಲ್ಲಿ ಅಜಿತ್ ಪವಾರ್ ಅವರ ಪಾತ್ರದ ಕುರಿತು ಎಸಿಬಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು.

ಮಹಾರಾಷ್ಟ್ರದಲ್ಲಿ ಎನ್​ಸಿಪಿ, ಕಾಂಗ್ರೆಸ್​​ ಮತ್ತು ಶಿವಸೇನೆಯ ಮಹಾ ವಿಕಾಸ ಅಘಾಡಿ ಕೂಟ ಸರ್ಕಾರ ರಚನೆಯಾದ ನವೆಂಬರ್ 28ರ ಹಿಂದಿನ ದಿನ ನವೆಂಬರ್ 27 ರಂದು ಅಫಿಡವಿಟ್​ ಸಲ್ಲಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com