ಕಾಮುಕರ ಸಂಹಾರ: ಆರೋಪಿಗಳ ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ 'ಹೈ' ಆದೇಶ

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಡಿ.9ರವರೆಗೂ ಮೃತದೇಹಗಳನ್ನು ಸಂರಕ್ಷಿಸುವಂತೆ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಡಿ.9ರವರೆಗೂ ಮೃತದೇಹಗಳನ್ನು ಸಂರಕ್ಷಿಸುವಂತೆ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. 

ಎನ್'ಕೌಂಟರ್ ಕಾನೂನು ಬಾಹಿರ ಹತ್ಯೆಎಂದು ಹೇಳಲಾಗುತ್ತಿದ್ದು, ಪ್ರಕರಣ ಸಂಬಂಧ ನ್ಯಾಯಾಂಗ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಪೆನ್'ಡ್ರೈವ್ ಮೂಲಕ ಮರಣೋತ್ತರ ಪರೀಕ್ಷೆಯ ವಿಡಿಯೋವನ್ನು ಜಿಲ್ಲಾ ಪ್ರಧಾನ ನ್ಯಾಯಾಧೀಶರಿಗೆ ಸಲ್ಲಿಸುವಂತೆ ಸೂಚಿಸಿದೆ. 

ಡಿಸೆಂಬರ್ 9ರ ರಾತ್ರಿ 8 ಗಂಟೆವರೆಗೂ ಎನ್'ಕೌಂಟರ್'ನಲ್ಲಿ ಹತ್ಯೆಯಾಗಿರುವ ಆರೋಪಿಗಳು, ಸಂತ್ರಸ್ತರು ಹಾಗೂ ಶಂಕಿತರ ಮೃತದೇಹಗಳನ್ನು ಸಂರಕ್ಷಿಸಿ ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿದೆ. 

ಮಹಬೂಬ್ ನಗರದ ಜಿಲ್ಲೆಯಲ್ಲಿರುವ ರಾಜ್ಯ ಅನುದಾನಿತ ಆಸ್ಪತ್ರೆಯಲ್ಲಿ ಎಲ್ಲಾ ನಾಲ್ವರು ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ಇದೀಗ ಅಂತ್ಯಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ನವೆಂಬರ್ 29 ರಂದು ಹತ್ಯೆಯಾಗಿರುವ ಕಾಮುಕರು ಪ್ರಿಯಾಂಕಾ ರೆಡ್ಡಿ ಮೇಲೆ ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. 

ಇದರಂತೆ ನಿನ್ನೆ ಬೆಳಗಿನ ಜಾವ ತನಿಖೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್'ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com