ಭಾರತ ವಿಶ್ವದ ರೇಪ್ ರಾಜಧಾನಿ: ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್ ನಲ್ಲಿ ಅತ್ಯಾಚಾರಿಗಳಿಗೆ ಗುಂಡಿಕ್ಕಿ ಪೊಲೀಸರು ಎನ್ ಕೌಂಟರ್ ಮಾಡಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರತ ವಿಶ್ವದ ರೇಪ್ ರಾಜಧಾನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ತಿರುವನಂತಪುರಂ: ಹೈದರಾಬಾದ್ ನಲ್ಲಿ ಅತ್ಯಾಚಾರಿಗಳಿಗೆ ಗುಂಡಿಕ್ಕಿ ಪೊಲೀಸರು ಎನ್ ಕೌಂಟರ್ ಮಾಡಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರತ ವಿಶ್ವದ ರೇಪ್ ರಾಜಧಾನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ಇಲ್ಲಿ ಸೂಕ್ತ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ವಿದೇಶಗಳು ಪ್ರಶ್ನೆ ಮಾಡುತ್ತಿವೆ ಎಂದು ಹೇಳಿದ್ದಾರೆ. 

ಇನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಒಂದು ಮಾತನ್ನೂ ಆಡುತ್ತಿಲ್ಲ ಎಂದು ಪ್ರಶ್ನಿಸಿದರು. 

ಈ ದೇಶವನ್ನು ನಡೆಸುತ್ತಿರುವ ವ್ಯಕ್ತಿ ಹಿಂಸೆ ಮತ್ತು ವಿವೇಚನೆಯಿಲ್ಲದ ಶಕ್ತಿಯನ್ನು ನಂಬುತ್ತಿರುವುದೇ ಇದಕ್ಕೆ ಕಾರಣ ಎಂದು ಮೋದಿ ವಿರುದ್ಧ ಗುಡುಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com