ಹೈದರಾಬಾದ್ ಎನ್ಕೌಂಟರ್ ನಂತೆ ಉನ್ನಾವೋ ಅತ್ಯಾಚಾರಿಗಳಿಗೂ ಗುಂಡಿಕ್ಕಿ: ನೆಟ್ಟಿಗರ ಆಕ್ರೋಶ 

ಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಗುಂಡಿಟ್ಟು ಹತ್ಯೆ ಮಾಡಬೇಕು ಎಂಬ ಆಕ್ರೋಶ, ಕೂಗು ಎಲ್ಲ ಕಡೆ ವ್ಯಕ್ತವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಗುಂಡಿಟ್ಟು ಹತ್ಯೆ ಮಾಡಬೇಕು ಎಂಬ ಆಕ್ರೋಶ, ಕೂಗು ಎಲ್ಲ ಕಡೆ ವ್ಯಕ್ತವಾಗಿದೆ.

ದಿಶಾ ಅತ್ಯಾಚಾರಿ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ರೀತಿಯಲ್ಲೇ ಉನ್ನಾವೋ ಆರೋಪಿಗಳಿಗೆ ಶಿಕ್ಷೆ ನೀಡಿ ಎಂದು ಸಾಮಾಜಿಕ ಜಾಲತಾಣದದಲ್ಲಿ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. 

ನವೆಂಬರ್ 29 ರಂದು ಹತ್ಯೆಯಾಗಿರುವ ಕಾಮುಕರು ಪ್ರಿಯಾಂಕಾ ರೆಡ್ಡಿ ಮೇಲೆ ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. 

ಇದರಂತೆ ಗುರುವಾರ ಬೆಳಗಿನ ಜಾವ ತನಿಖೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್'ಕೌಂಟರ್ ನಡೆಸಿ ಹತ್ಯೆ ಮಾಡಿದ್ದರು. ಪೊಲೀಸರ ಈ ಕಾರ್ಯಕ್ಕೆ ದೇಶದಾದ್ಯಂತ ಶ್ಲಾಘನೆಗಳು ವ್ಯಕ್ತವಾಗತೊಡಗಿವೆ. 

ಈ ನಡುವಲ್ಲೇ ಕಾಮುಕರ ಅಟ್ಟಹಾಸಕ್ಕೆ ನಲುಗಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದು, ಇದೀಗ ಹೈದರಾಬಾದ್ ರೀತಿಯಲ್ಲಿಯೇ ಈ ಪ್ರಕರಣದ ಅತ್ಯಾಚಾರಿಗಳಿಗೂ ಗುಂಡಿಕ್ಕಿ ಹತ್ಯೆ ಮಾಡಬೇಕೆಂಬ ಕೂಗುಗಳು ಇದೀಗ ವ್ಯಕ್ತವಾಗತೊಡಗಿದೆ. 

ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಐದು ಮಂದಿ ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಕಾಮುಕರು ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಶೇ.90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾಳೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com