ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಉ.ಪ್ರದೇಶ ಸರ್ಕಾರ ಏನು ಮಾಡುತ್ತಿದೆ: ಪ್ರಿಯಾಂಕಾ ಗಾಂಧಿ ಪ್ರಶ್ನೆ

ಉತ್ತರಪ್ರದೇಶದಲ್ಲಿ ಪ್ರತೀನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇಂತಹ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಪ್ರಶ್ನಿಸಿದ್ದಾರೆ. 
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ

ನವದೆಹಲಿ: ಉತ್ತರಪ್ರದೇಶದಲ್ಲಿ ಪ್ರತೀನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಇಂತಹ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಪ್ರಶ್ನಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉನ್ನಾವೋದಲ್ಲಿ ನಡೆದ ಹಿಂದಿನ ಘಟನೆಯನ್ನು ಗಂಭೀರವಾಗಿ ಪರಿಣಿಸಿ, ಸರ್ಕಾರವೇಕೆ ಸಂತ್ರಸ್ತೆಗೆ ರಕ್ಷಣೆ ನೀಡಲಿಲ್ಲ? ಎಫ್ಐಆರ್ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಅಧಿಕಾರಿ ವಿರುದ್ದ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಉತ್ತರಪ್ರದೇಶದಲ್ಲಿ ಪ್ರತೀನಿತ್ಯ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. 

ಇಲ್ಲದೆ, ಸಾವುದಕ್ಕೂ ಮುನ್ನ ವೈದ್ಯರೊಂದಿಗೆ ಸಂತ್ರಸ್ತೆ ಮಾತನಾಡಿದ್ದ ಮಾತುಗಳ ಚಿತ್ರವನ್ನು ಹಾಕಿದ್ದಾರೆ. ಚಿತ್ರದಲ್ಲಿ ನನ್ನನ್ನು ಕಾಪಾಡಿ, ನಾನು ಬದುಕಬೇಕೆಂದು ಸಂತ್ರಸ್ತೆ ವೈದ್ಯರನ್ನು ಕೇಳಿಕೊಂಡಿರುವ ಮಾತುಗಳು ಕಂಡು ಬಂದಿದೆ. 

ಸಂತ್ರಸ್ತೆ ಕುಟುಂಬಸ್ಥರು ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಆಕೆಗೆ ನ್ಯಾಯ ಕೊಡಿಸಲು ಸಾಧ್ಯವಾಗಲಿಲ್ಲ. ಇದು ನಮ್ಮೆಲ್ಲರ ವೈಫಲ್ಯವೇ ಸರಿ. ನಾವೆಲ್ಲರೂ ತಪ್ಪಿತಸ್ಥರಾಗಿದ್ದೇವೆ. ಉತ್ತರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದೆಗಟ್ಟಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com