ಲೋಕಸಭೆಯಲ್ಲಿ ಪೌರತ್ವ ಮಸೂದೆ ಮಂಡನೆ: ವಿಧೇಯಕ ಅಲ್ಪಸಂಖ್ಯಾತರ ವಿರುದ್ಧವಿಲ್ಲ- ಅಮಿತ್  ಶಾ

ಪಾಕಿಸ್ತಾನ, ಬಾಂಗ್ಲಾದೇಶ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸೋಮವಾರ ಲೋಕಸಭೆಯಲ್ಲಿ ಮಂಡನೆ ಮಾಡಿದ್ದಾರೆ. 
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸೋಮವಾರ ಲೋಕಸಭೆಯಲ್ಲಿ ಮಂಡನೆ ಮಾಡಿದ್ದಾರೆ. 

ಮಸೂದೆ ಮಂಡಿಸಿದ ಬಳಿಕ ಲೋಕಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ ಅವರು, ಈ ವಿಧೇಯಕವು ಶೇ.001 ರಷ್ಟೂ ಕೂಡ ದೇಶದಲ್ಲಿರುವ ಅಲ್ಪ ಸಂಖ್ಯಾತಾರ ವಿರುದ್ಧವಿಲ್ಲ ಎಂದು ಹೇಳಿದ್ದಾರೆ. 

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಲ್ಲಿನ ಧಾರ್ಮಿಕ ಕಿರುಕುಳಗಳಿಗೆ ಹೆದರಿ, ಅಲ್ಲಿಂದ ಭಾರತಕ್ಕೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ಕೊಡುವುದೇ ಈ ಮಸೂದೆಯ ಉದ್ದೇಶವಾಗಿದೆ. ಆದರೆ, ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದಲ್ಲಿ ಈಗಾಗಲೇ ಈ ವಿಧೇಯಕಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. 

ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರನ್ನು ಆ ದೇಶಕ್ಕೆ ಹಿಮ್ಮೆಟ್ಟಿಸುವ ಅಸ್ಸಾಂ ಒಪ್ಪಂದ-1985ಗೆ ಇದರಿಂದ ಹಿನ್ನಡೆಯಾಗಲಿದೆ ಎಂಬುದು ಈಶಾನ್ಯ ಭಾರತದ ಬಹುತೇಕ ವಲಯಗಳ ಅಭಿಪ್ರಾಯ. ಹೀಗಾಗಿ ವಿಧೇಯಕ ವಿರೋಧಿಸಿ ಈಗಾಗಲೇ ಈಶಾನ್ಯ ವಿದ್ಯಾರ್ಥಗಳ ಒಕ್ಕೂಟ ಡಿಸೆಂಬರ್ 10ರಂದು 11ತಾಸಿನ ಬಂದ್'ಗೆ ಕರೆ ನೀಡಿದೆ. ಈ ವಿಧೇಯಕ 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿತ್ತು. ಈ ಹಿಂದಿನ ಅವಧಿಯಲ್ಲಿ ಮೋದಿ ಸರ್ಕಾರ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. 

ಆದರೆ, ಈಶಾನ್ಯದಲ್ಲಿ ಉಂಟಾಗಿದ್ದ ತೀವ್ರ ವಿರೋಧದ ಕಾರಣ ರಾಜ್ಯಸಭೆಯಲ್ಲಿ ಅದನ್ನು ಮಂಡಿಸಿರಲಿಲ್ಲ. ಮುಂದಿನ 4 ದಿನಗಳಲ್ಲಿ ಸಂಸತ್ ನಲ್ಲಿ ಮಹತ್ವದ ಮಸೂದೆಗಳನ್ನು ಮಂಡನೆಯಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ಸೇರಿದಂತೆ ಬಹುತೇಕ ಎಲ್ಲಾ ಪಕ್ಷಗಳು ವಿಪ್ ಜಾರಿ ಮಾಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com