ನಿರ್ಭಯಾ ದೋಷಿಗಳಿಗೆ ಶಿಕ್ಷೆ ಸನ್ನಿಹಿತ: ಗಲ್ಲು ಶಿಕ್ಷೆ ಜಾರಿಗೊಳಿಸುವ ಅಧಿಕಾರಿಗಾಗಿ ಹುಡುಕಾಟ ಆರಂಭ

ಗಲ್ಲು ಶಿಕ್ಷೆಯಿಂದ ಕ್ಷಮೆ ಕೋರಿ ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿರುವ ಬೆನ್ನಲ್ಲೇ, ದಹಲಿಯ ತಿಹಾರ್ ಜೈಲಿನ ಅಧಿಕಾರಿಗಳು, ಗಲ್ಲು ಶಿಕ್ಷೆ ಜಾರಿಗೊಳಿಸುವ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 
ನಿರ್ಭಯಾ ದೋಷಿಗಳಿಗೆ ಶಿಕ್ಷೆ ಸನ್ನಿಹಿತ
ನಿರ್ಭಯಾ ದೋಷಿಗಳಿಗೆ ಶಿಕ್ಷೆ ಸನ್ನಿಹಿತ

ನವದೆಹಲಿ: ಗಲ್ಲು ಶಿಕ್ಷೆಯಿಂದ ಕ್ಷಮೆ ಕೋರಿ ನಿರ್ಭಯಾ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿರುವ ಬೆನ್ನಲ್ಲೇ, ದಹಲಿಯ ತಿಹಾರ್ ಜೈಲಿನ ಅಧಿಕಾರಿಗಳು, ಗಲ್ಲು ಶಿಕ್ಷೆ ಜಾರಿಗೊಳಿಸುವ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

ಪ್ರಸ್ತುತ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೊಳಿಸುವ ಯಾವುದೇ ಅರ್ಹ ವ್ಯಕ್ತಿ ಅಥವಾ ಅಧಿಕಾರಿ ಇಲ್ಲದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಜೈಲು ಅಧಿಕಾರಿಗಳ ಜೊತೆ ತಿಹಾರ್ ಜೈಲಿನ ಅಧಿಕಾರಿಗಳು ಮಾತುಕತೆ ಆರಂಭಿಸಿದ್ದಾರೆಂದು ಮೂಲಗಳು ತಿಳಿಸಿವೆ. ಇದು ನಿರ್ಭಯಾ ಪ್ರಕರಣದ ನಾಲ್ವರು ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸಮಯ ಸನ್ನಿಹಿತವಾಗಿದೆ ಎಂಬುದರ ಸುಳಿವಾಗಿದೆ ಎಂದು ಹೇಳಲಾಗುತ್ತಿದೆ. 

ತಿಹಾರ್ ಜೈಲಲ್ಲಿ ಯಾವ ಗೊಂದಲವಿಲ್ಲ, ಅಗತ್ಯ ಬಿದ್ದರೆ ಗಲ್ಲುಶಿಕ್ಷೆ ವಿಧಿಸಲು ಬೇರೆ ರಾಜ್ಯದ ಅಧಿಕಾರಿ ಕರೆತರುತ್ತೇವೆ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 

2001ರಲ್ಲಿ ನಡೆದ ಸಂಸತ್ಮೇಲಿನ ದಾಳಿ ಪ್ರಕರಣದ ದೋಷಿ ಅಫ್ಜಲ್ ಗುರುಗೆ 2013ರ ಫೆಬ್ರವರಿ ತಿಂಗಳಿನಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ತಿಹಾರ್ ಜೈಲಿನ ಸಿಬ್ಬಂದಿಯೊಬ್ಬರೇ ಈ ಕೆಲಸ ನೆರವೇರಿಸಿದ್ದರು. ಆ ಬಳಿಕ ಯಾರನ್ನೂ ಗಲ್ಲಿಗೆ ಏರಿಸಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com