ಹೈದರಾಬಾದ್ ಎನ್ ಕೌಂಟರ್ ಪ್ರಕರಣ ತನಿಖೆಗೆ ಎಸ್‌ಐಟಿ ನೇಮಕ

ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳನ್ನು ಕಳೆದ ವಾರ ಪೋಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿರುವ ಸಂಬಂಧ ತನಿಖೆ ನಡೆಸಲು ತೆಲಂಗಾಣ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ನಿಟ್ಟಿನಲ್ಲಿ ಭಾನುವಾರ ಸರ್ಕಾರದ ಆದೇಶ ಹೊರಡಿಸಿದೆ. 
ವಿ ಸಿ ಸಜ್ಜನರ್
ವಿ ಸಿ ಸಜ್ಜನರ್

ಹೈದರಾಬಾದ್: ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳನ್ನು ಕಳೆದ ವಾರ ಪೋಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿರುವ ಸಂಬಂಧ ತನಿಖೆ ನಡೆಸಲು ತೆಲಂಗಾಣ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ನಿಟ್ಟಿನಲ್ಲಿ ಭಾನುವಾರ ಸರ್ಕಾರದ ಆದೇಶ ಹೊರಡಿಸಿದೆ.

"ನಾಲ್ವರ ಸಾವಿಗೆ ಕಾರಣವಾದ ಎನ್ ಕೌಂಟರ್ ನ ಹಿಂದಿನ ಕಾರಣಗಳು,ಸನ್ನಿವೇಶಗಳನ್ನು . ಕಂಡುಹಿಡಿಯಬೇಕು ಮತ್ತು ಸತ್ಯವನ್ನು ಮರುಸ್ಥಾಪಿಸಬೇಕುಎಂಬ ಅಂಶದ ದೃಷ್ಟಿಯಿಂದ, ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಲಾಗಿದೆ" ಆದೇಶದಲ್ಲಿ ಹೇಳಿದೆ.

ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಎಂ ಭಾಗವತ್  ನೇತೃತ್ವದ ಎಂಟು ಸದಸ್ಯರ ಎಸ್‌ಐಟಿ, ಎನ್ ಕೌಂಟರ್ ಪ್ರಕರಣದಲ್ಲಿ ಈ ಹಿಂದೆ ದಾಖಲಾಗಿರುವ ಮತ್ತು ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ರಾಜ್ಯದಲ್ಲಿ ದಾಖಲಾದ ಇತರ ಎಲ್ಲಾ ಸಂಬಂಧಿತ ಪ್ರಕರಣಗಳ ತನಿಖೆಯನ್ನು ತಕ್ಷಣವೇ ವಹಿಸಿಕೊಳ್ಳಬೇಕು ಎಂದು ಅದು ಹೇಳಿದೆ. ಎಸ್‌ಐಟಿ ತನಿಖೆಯನ್ನು ಪೂರ್ಣಗೊಳಿಸಬೇಕು ಮತ್ತು ವರದಿಯನ್ನು ಸಮರ್ಥ ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಎಂದು ಅದು ಹೇಳಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com