ಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ 

ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. 
ಪೊಲೀಸರು ಲಾಠಿಚಾರ್ಜ್ ಮಾಡುತ್ತಿರುವುದು
ಪೊಲೀಸರು ಲಾಠಿಚಾರ್ಜ್ ಮಾಡುತ್ತಿರುವುದು

ನವದೆಹಲಿ: ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.


ವಿಶ್ವವಿದ್ಯಾಲಯ ಕ್ಯಾಂಪಸ್ ನ ಬಲಭಾಗದಲ್ಲಿ ತೀವ್ರ ಪೊಲೀಸ್ ಸಿಬ್ಬಂದಿ ನಿಯೋಜನೆ ಮತ್ತು ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ನಿನ್ನೆ ಮೆರವಣಿಗೆ ಹೊರಟಾಗ ಪೊಲೀಸರು ವಿದ್ಯಾರ್ಥಿಗಳನ್ನು ಬಿಕಜಿ ಕಾಮಾ ಪ್ಲೇಸ್ ಮೆಟ್ರೊ ನಿಲ್ದಾಣದಲ್ಲಿ ತಡೆದು ನಿಲ್ಲಿಸಿದರು. ಪೊಲೀಸರ ಸರ್ಪಗಾವಲು ಇದ್ದ ಪ್ರದೇಶಕ್ಕೆ ವಿದ್ಯಾರ್ಥಿಗಳು ಆಗಮಿಸಿದಾಗ ಬ್ಯಾರಿಕೇಡ್ ನಿಂದ ಆಚೆ ನೆಗೆದು ಲಾಠಿ ಚಾರ್ಜ್ ಮಾಡಲೆತ್ನಿಸಿದರು.


ಈ ಬಗ್ಗೆ ಹೇಳಿಕೆ ನೀಡಿದ ಜೆಎನ್ ಯು ವಿದ್ಯಾರ್ಥಿ ಸಂಘಟನೆ(ಜೆಎನ್ ಯುಎಸ್ ಯು) ಅಧ್ಯಕ್ಷ ಐಶೆ ಘೋಷ್, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅವರ ಮೇಲೆ ಪ್ರತಿಭಟನಾಕಾರರ ಮೇಲೆ ಪೊಲೀಸರು ದಾಳಿ ನಡೆಸಿ ಕ್ಯಾಂಪಸ್ ಗೆ ಮರಳುವಂತೆ ಆದೇಶಿಸಿದರು. ಹಾಸ್ಟೆಲ್ ಶುಲ್ಕ ಏರಿಕೆ ಹಿಂತೆಗೆದುಕೊಳ್ಳುವವರೆಗೆ ಮತ್ತು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸುವವರೆಗೆ ನಾವು ಇಲ್ಲಿಂದ ಹೋಗುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com