ಪೌರತ್ವ ಮಸೂದೆಗೆ ಬೆಂಬಲ; ನಿತೀಶ್, ಜೆಡಿಯು ವಿರುದ್ಧ ಪ್ರಶಾಂತ್ ಕಿಶೋರ್ ಅಸಮಾಧಾನ

ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ ವಿಚಾರವಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ವಿರುದ್ಧ ಖ್ಯಾತ ರಾಜಕೀಯ ತಂತ್ರಜ್ಞ ಹಾಗೂ ಜೆಡಿಯು ಮುಖಂಡ ಪ್ರಶಾಂತ್ ಕಿಶೋರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡಿಸಿದ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ ವಿಚಾರವಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ವಿರುದ್ಧ ಖ್ಯಾತ ರಾಜಕೀಯ ತಂತ್ರಜ್ಞ ಹಾಗೂ ಜೆಡಿಯು ಮುಖಂಡ ಪ್ರಶಾಂತ್ ಕಿಶೋರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, 'ಧರ್ಮದ ಆಧಾರದ ಮೇಲೆ ನಾಗರಿಕರ ಹಕ್ಕುಗಳ ಕುರಿತು ತಾರತಮ್ಯ ಮಾಡುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲ ವ್ಯಕ್ತಪಡಿಸಿರುವುದನ್ನು ನೋಡಿ ನನಗೆ ಬೇಸರವಾಯಿತು. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಎಂಬ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಹಾಗೂ ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವಕ್ಕೆ ಇದು ಅಸಂಗತವಾಗಿದೆ ಎಂದು ಕಿಶೋರ್ ಟ್ವೀಟ್ ಮಾಡಿದ್ದಾರೆ.

ಇನ್ನು ನಿನ್ನೆ ರಾತ್ರಿ ಲೋಕಸಭೆಯಲ್ಲಿ ಮಂಡಿಸಲಾದ ಪೌರತ್ವ ತಿದ್ದುಪಡಿ ಮಸೂದೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸಹಿತ ಹಲವು ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು. ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿರುವ ಅಲ್ಪ ಸಂಖ್ಯಾತರಿಗೆ ಭಾರತೀಯ ಪೌರತ್ವದ ಭರವಸೆ ನೀಡುತ್ತಿರುವ ಕಾರಣ ಪೌರತ್ವ ಮಸೂದೆಗೆ ನಮ್ಮ ಪಕ್ಷ ಬೆಂಬಲ ಸೂಚಿಸುತ್ತದೆ ಎಂದು ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದರು. ಅದರೀಗ ಅವರದೇ ಪಕ್ಷದ ಮುಖಂಡ ಪ್ರಶಾಂತ್ ಕಿಶೋರ್ ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com