ಸುಪ್ರೀಂ ಕೋರ್ಟ್ ಅಂಗಳಕ್ಕೆ ಪೌರತ್ವ ತಿದ್ದುಪಡಿ ಮಸೂದೆ! 

ಲೋಕಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಪೌರತ್ವ (ತಿದ್ದುಪಡಿ) ಮಸೂದೆ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. 
ಸುಪ್ರೀಂ ಕೋರ್ಟ್ ಅಂಗಳಕ್ಕೆ ಪೌರತ್ವ ತಿದ್ದುಪಡಿ ಮಸೂದೆ!
ಸುಪ್ರೀಂ ಕೋರ್ಟ್ ಅಂಗಳಕ್ಕೆ ಪೌರತ್ವ ತಿದ್ದುಪಡಿ ಮಸೂದೆ!

ನವದೆಹಲಿ: ಲೋಕಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಪೌರತ್ವ (ತಿದ್ದುಪಡಿ) ಮಸೂದೆ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. 

ಮಸೂದೆಯನ್ನು ವಿರೋಧಿಸುತ್ತಿರುವ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್ ಯು) ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದೆ. 

ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. 

ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com