ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ: ಗುವಾಹಟಿಯಲ್ಲಿ ಕರ್ಫ್ಯೂ, ಅಸ್ಸಾಂನಲ್ಲಿ ಇಂಟರ್‌ನೆಟ್‌ ಸೇವೆ ಸ್ಧಗಿತ!

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ತ್ರಿಪುರಕ್ಕೆ ಭಾರತೀಯ ಸೇನೆಯನ್ನು ನಿಯೋಜಿಸಲಾಗಿದ್ದು ಅಸ್ಸಾಂನಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ತ್ರಿಪುರಕ್ಕೆ ಭಾರತೀಯ ಸೇನೆಯನ್ನು ನಿಯೋಜಿಸಲಾಗಿದ್ದು ಅಸ್ಸಾಂನಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿ ಅನುಮೋದನೆ ಪಡೆಯುತ್ತಿದ್ದರು. ಇದೀಗ ರಾಜ್ಯಸಭೆಯಲ್ಲಿ ಮಸೂದೆ ಕುರಿತು ಚರ್ಚೆಗಳು ನಡೆಯುತ್ತಿದ್ದು ಇತ್ತ ಇದನ್ನು ವಿರೋಧಿಸಿದ್ದ ಅಖಿಲ ಅಸ್ಸಾಂ ವಿದ್ಯಾರ್ಥಿ ಸಂಘ(ಎಎಎಸ್‍ಯು) ಸೇರಿದಂತೆ ಈಶಾನ್ಯ ಭಾಗದ ವಿದ್ಯಾರ್ಥಿ ಒಕ್ಕೂಟಗಳ ವೇದಿಕೆಯಾದ ಈಶಾನ್ಯ ವಿದ್ಯಾರ್ಥಿ ಒಕ್ಕೂಟ (ಎನ್‍ಇಎಸ್‍ಒ) ಬಂದ್ ಗೆ ಕರೆ ನೀಡಿದ್ದವು. ಹೀಗಾಗಿ ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿದ್ಯಾರ್ಥಿ ಸಂಘಟನೆಗಳ ಬಂದ್ ಹಿನ್ನಲೆಯಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಮುಖವಾಗಿ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನಾಕಾರರು ರಸ್ತೆಗಳಿದು ಟೈರ್ ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ತ್ರಿಪುರಾ ಮತ್ತು ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಈ ರಾಜ್ಯಗಳಲ್ಲಿ ಸೇನೆ ನಿಯೋಜಿಸಲಾಗಿದೆ. ಇದೇ ವೇಳೆ ಭದ್ರತಾ ದೃಷ್ಠಿಯಿಂದ ಅಸ್ಸಾಂನಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಗುವಾಹಟಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಅಸ್ಸಾಂಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಸೈನಿಕರನ್ನು ರವಾನೆ ಮಾಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್ ಅವರು, ತ್ರಿಪುರಾದ ಕಾಂಚನ್ ಪುರ್ ಮತ್ತು ಮನು ಪ್ರದೇಶಗಳಿಗೆ ಸೇನೆಯ 2 ಕಾಲಂ ಸೈನಿಕರನ್ನು ರವಾನೆ ಮಾಡಲಾಗಿದ್ದು, ಪ್ರತೀ ಕಾಲಂನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳ ಸಹಿತ 70 ಸೈನಿಕರು ಇರಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com