ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾಯ್ದೆಯಾಗಿ ಜಾರಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

Published: 13th December 2019 08:04 AM  |   Last Updated: 13th December 2019 08:11 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

ಈ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಬಯಸಿ ಡಿಸೆಂಬರ್ 31, 2014ರವರೆಗೆ ಬಂದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವ ನೀಡುವುದಾಗಿದೆ. ಇದರಿಂದ ಅವರು ಅಕ್ರಮ ವಲಸಿಗರು ಎನಿಸುವುದಿಲ್ಲ.

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಕಳೆದ ಸೋಮವಾರ ಲೋಕಸಭೆಯಲ್ಲಿ ಬುಧವಾರ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿತ್ತು.

Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp