ಪೌರತ್ವ ತಿದ್ದುಪಡಿ ಮಸೂದೆ: ದಿಬ್ರೂಗಢ್ ನಲ್ಲಿ ಕರ್ಫ್ಯೂ ಸಡಿಲಿಕೆ

ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಿಬ್ರೂಗಢ್: ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಈಶಾನ್ಯ ಭಾರತದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರ ತಡೆಗೆ ಹೇರಲಾಗಿದ್ದ ಕರ್ಫ್ಯೂವನ್ನು ಕೆಲ ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.

ತೀವ್ರ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಅಸ್ಸಾಂನ ದಿಬ್ರೂಗಢ್ ನಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತ ಗುವಾಹತಿಯಲ್ಲಿ ಇನ್ನೂ ಹಿಂಸಾಚಾರ ಮುಂದುವರೆದಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹಾರಿಸಿದ್ದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಕರ್ಫ್ಯೂ ಹೇರಿಕೆ ಹೊರತಾಗಿಯೂ ಬೀದಿಗಿಳಿದ್ದ ಸಾವಿರಾರು ಮಂದಿ ಕೇಂದ್ರ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಟೈರ್ ಗೆ ಬೆಂಕಿ ಹಾಕುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ರಕ್ಷಣಾ ಪಡೆಗಳ ಮೇಲೆ ಕಲ್ಲು ತೂರಿದ್ದು, ಈ ವೇಳೆ ಲಾಠಿಚಾರ್ಜ್ ಮಾಡಲಾಗಿದೆ. ಅದಾಗ್ಯೂ ಪ್ರತಿಭಟನಾಕಾರರು ಹಿಂದಕ್ಕೆ ತೆರಳದ ಕಾರಣ ಪೊಲೀಸರು ಗುಂಡು ಹಾರಿಸಿದ್ದಾರೆ.

ಈ ವೇಳೆ ಇಬ್ಬರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈಶಾನ್ಯ ಭಾರತದ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮೇಘಾಲಯಗಳ ಒಟ್ಟು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಸೈನಿಕರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com