ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ತೀವ್ರ ಪ್ರತಿಭಟನೆ: ಜಪಾನ್ ಪ್ರಧಾನಿ ಭಾರತ ಪ್ರವಾಸ ಮುಂದೂಡಿಕೆ!

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸವನ್ನು ಮುಂದೂಡಲಾಗಿದೆ.
ಶಿಂಜೋ ಅಬೆ-ಪ್ರಧಾನಿ ಮೋದಿ
ಶಿಂಜೋ ಅಬೆ-ಪ್ರಧಾನಿ ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸವನ್ನು ಮುಂದೂಡಲಾಗಿದೆ.

ಭಾರತದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಭಾರತದ ನಿಲುವಿಗೆ ವಿಶ್ವ ಸಮುದಾಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಶಾನ್ಯ ಭಾರತದ ರಾಜ್ಯಗಳಾದ ತ್ರಿಪುರ, ಮೇಘಾಲಯ, ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈಗಾಗಲೇ ಪೊಲೀಸರ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವು ಗಾಯಗೊಂಡಿದ್ದಾರೆ. ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಈಶಾನ್ಯ ಭಾರತದ ರಾಜ್ಯಗಳಿಗೆ 15 ಸಾವಿರಕ್ಕೂ ಅಧಿಕ ಸೈನಿಕರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸ ಪ್ರಾಮುಖ್ಯತೆ ಹೊಂದಿದ್ದು ಪ್ರತಿಭಟನೆ ವೇಳೆ ಶಾಂತಿಯೂತ ಚರ್ಚೆಗಳು ನಡೆಸಲು ಸಾಧ್ಯವಾಗದು ಎಂಬ ಕಾರಣ ಶಿಂಜೋ ಅವರ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಎಂಇಎ ವಕ್ತಾರ ರವೀಶ್ ಕುಮಾರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದೇ ಭಾನುವಾರ ಜಪಾನ್ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟೆ ನೀಡಬೇಕಿತ್ತು. ಅಸ್ಸಾಂನ ಗುವಾಹತಿಯಲ್ಲಿ ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದರು. ಆದರೆ ಪ್ರಸ್ತುತ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಜಪಾನ್ ಪ್ರಧಾನಿಯ ಭಾರತ ಪ್ರವಾಸವೇ ರದ್ದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com