ಕೇಂದ್ರಕ್ಕೆ ಸೆಡ್ಡು: ಪೌರತ್ವ ತಿದ್ದುಪಡಿ ಮಸೂದೆ ಜಾರಿಗೊಳಿಸುವುದಿಲ್ಲವೆಂದು ಪಟ್ಟು ಹಿಡಿದಿವೆ ಈ 2 ರಾಜ್ಯಗಳು! 

ಕೇಂದ್ರ ಸರ್ಕಾರ ಸಂಸತ್ ನ ಎರಡೂ ಸದನಗಳಲ್ಲಿ ಪೌರತ್ವ ಮಸೂದೆಗೆ ಅಂಗೀಕಾರ ಪಡೆಯುವಲ್ಲಿ ಯಶಸ್ಸು ಕಂಡಿದೆ. ಈ ಮಸೂದೆ ಜಾರಿಗೆ ಈಶಾನ್ಯ ರಾಜ್ಯಗಳಲ್ಲಿ ವಿನಾಯಿತಿ ನೀಡಲಾಗಿದೆ. ಇದರ ಹೊರತಾಗಿಯೂ ಅಲ್ಲಿ ಪ್ರತಿಭಟನೆಗಳು ವ್ಯಾಪಕವಾಗಿ ನಡೆಯುತ್ತಿವೆ. 

Published: 13th December 2019 01:16 AM  |   Last Updated: 13th December 2019 01:16 AM   |  A+A-


Kerala, Punjab defy Parliament, say won't implement Citizenship Amendment Bill

ಕೇಂದ್ರಕ್ಕೆ ಸೆಡ್ಡು: ಪೌರತ್ವ ತಿದ್ದುಪಡಿ ಮಸೂದೆ ಜಾರಿಗೊಳಿಸುವುದಿಲ್ಲವೆಂದು ಪಟ್ಟು ಹಿಡಿದಿವೆ ಈ 2 ರಾಜ್ಯಗಳು!

Posted By : srinivasrao
Source : The New Indian Express

ತಿರುವನಂತಪುರಂ: ಕೇಂದ್ರ ಸರ್ಕಾರ ಸಂಸತ್ ನ ಎರಡೂ ಸದನಗಳಲ್ಲಿ ಪೌರತ್ವ ಮಸೂದೆಗೆ ಅಂಗೀಕಾರ ಪಡೆಯುವಲ್ಲಿ ಯಶಸ್ಸು ಕಂಡಿದೆ. ಈ ಮಸೂದೆ ಜಾರಿಗೆ ಈಶಾನ್ಯ ರಾಜ್ಯಗಳಲ್ಲಿ ವಿನಾಯಿತಿ ನೀಡಲಾಗಿದೆ. ಇದರ ಹೊರತಾಗಿಯೂ ಅಲ್ಲಿ ಪ್ರತಿಭಟನೆಗಳು ವ್ಯಾಪಕವಾಗಿ ನಡೆಯುತ್ತಿವೆ. 

ಈ ಬೆನ್ನಲ್ಲೇ ಪೌರತ್ವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿರುವ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಈ ಕಾನೂನನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. 

ಕೇರಳ ಹಾಗೂ ಪಂಜಾಬ್ ಸರ್ಕಾರಗಳು ಪೌರತ್ವ ಮಸೂದೆಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. 

ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನವನ್ನು ಜಾರಿಗೊಳಿಸುವುದಕ್ಕೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಸೂದೆ ಭಾರತದ ಜಾತ್ಯಾತೀತತೆಗೆ ಧಕ್ಕೆ ಉಂಟುಮಾಡುತ್ತದೆ ಆದ್ದರಿಂದ ಇದನ್ನು ರಾಜ್ಯದಲ್ಲಿ ಅನುಮೋದಿಸುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿಗಳು ಹೇಳಿದ್ದಾರೆ. 

ಆದರೆ ಸಂವಿಧಾನದ ತಜ್ಞರು ರಾಜ್ಯಗಳಿಗೆ ಸಿಎಬಿಗೆ ಸಂಬಂಧಿಸಿದಂತೆ ನಿರ್ಣಾಯಕ ಪಾತ್ರವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಪಂಜಾಬ್ ಸಿಎಂ ಹಾಗೂ ಕೇರಳ ಸಿಎಂ ತೆಗೆದುಕೊಂಡಿರುವ ನಿರ್ಧಾರಗಳಿಗೆ ಕಾನೂನಾತ್ಮಕವಾಗಿ ಮಾನ್ಯತೆ ಇಲ್ಲ ಎಂದು ಹೇಳಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp