ನಿರ್ಭಯಾ ಕೇಸ್: ಡಿ.18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ದೆಹಲಿ ಕೋರ್ಟ್ 

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಡಿಸೆಂಬರ್ 18ಕ್ಕೆ ಮುಂದೂಡಿದೆ.
ನಿರ್ಭಯಾ ತಾಯಿ
ನಿರ್ಭಯಾ ತಾಯಿ

ನವದೆಹಲಿ:ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಡಿಸೆಂಬರ್ 18ಕ್ಕೆ ಮುಂದೂಡಿದೆ.


ತಮಗೆ ವಿಧಿಸಿರುವ ಮರಣದಂಡನೆ ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಕೋರಿ ನಾಲ್ವರು ಆರೋಪಿಗಳಲ್ಲಿ ಒಬ್ಬಾತ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 17ರಂದು ನಡೆಸಲಿದೆ.


ಇದಕ್ಕೆ ಪ್ರತಿಯಾಗಿ ಅತ್ಯಾಚಾರಿ ಆರೋಪಿಗಳಿಗೆ ಆದಷ್ಟು ಬೇಗ ಗಲ್ಲುಶಿಕ್ಷೆ ಜಾರಿಗೊಳಿಸುವಂತೆ ಕೋರಿ ದೆಹಲಿ ಕೋರ್ಟ್ ಗೆ ನಿರ್ಭಯಾ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಡಿ.18 ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.


ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೊರಾ, ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆದ ಬಳಿಕ ನಾವು ವಿಚಾರಣೆ ನಡೆಸುತ್ತೇವೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಿದರು.
ಇಂದಿನ ನ್ಯಾಯಾಲಯದ ವಿಚಾರಣೆ ವೇಳೆ ಅತ್ಯಾಚಾರ ಆರೋಪಿಗಳು ಬೇಕೆಂದೇ ವಿಳಂಬ ತಂತ್ರವನ್ನು ಮಾಡುತ್ತಿದ್ದಾರೆ ಎಂದು ನಿರ್ಭಯಾ ಪೋಷಕರು ಆರೋಪಿಸಿದರು. 


ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿಗಳಿಗೆ ಗಲ್ಲುಶಿಕ್ಷೆ ಘೋಷಣೆಯಾಗುವ ಸಾಧ್ಯತೆಯಿರುವುದರಿಂದ ಪ್ರಕರಣದ ಮರುಪರಿಶೀಲನೆಗಾಗಿ ಒಬ್ಬ ಅಪರಾಧಿ ಸುಪ್ರೀಂಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಅದು ಇದೇ 17ರಂದು ನಡೆಯಲಿದೆ. ಹೀಗಾಗಿ  ನಿರ್ಭಯಾ ಪೋಷಕರ ಅರ್ಜಿ ವಿಚಾರಣೆಯನ್ನು ದೆಹಲಿ ಕೋರ್ಟ್ ಡಿಸೆಂಬರ್ 18 ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com