ಉತ್ತರ ಕಾಶ್ಮೀರದ ಉರಿ ಜಿಲ್ಲೆಯಲ್ಲಿ ಪಾಕ್‍ನಿಂದ ಶೆಲ್ಲಿಂಗ್ ದಾಳಿ: ಇಬ್ಬರು ವ್ಯಕ್ತಿಗಳಿಗೆ ಗಾಯ

ಉತ್ತರ ಕಾಶ್ಮೀರ ಜಿಲ್ಲೆಯಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಶೆಲ್ಲಿಂಗ್ ಗುಂಡಿನ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾರಾಮುಲ್ಲಾ: ಉತ್ತರ ಕಾಶ್ಮೀರ ಜಿಲ್ಲೆಯಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಶೆಲ್ಲಿಂಗ್ ಗುಂಡಿನ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ. 

ಉರಿ ಸೆಕ್ಟರ್‍ನ ಗಡಿ ನಿಯಂತ್ರಣಾ ರೇಖೆಯಲ್ಲಿ ಭಾರತೀಯ ಸೇನೆಯ ಮುನ್ನೆಲೆ ಶಿಬಿರಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಪಡೆಗಳು ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪಾಕ್ ಪಡೆಗಳ ದಾಳಿಗೆ ಭಾರತೀಯ ಸೇನಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿದ್ದು, ಗುಂಡಿನ ಚಕಮಕಿ ಹಲವು ತಾಸುಗಳ ಕಾಲ ನಡೆದಿದೆ. ಪಾಕ್ ಪಡೆಗಳ ದಾಳಿಯಿಂದ ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಹಾಜಿಪೀರ್ ಸೆಕ್ಟರ್‍ನಲ್ಲಿ ಇತ್ತೀಚೆಗೆ ಪಾಕಿಸ್ತಾನ ಪಡೆಗಳು ಆರಕ್ಕೂ ಹೆಚ್ಚು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದವು. ಆದರೆ, ಯಾವುದೇ ಸಾವು-ನೋವು ಇಲ್ಲವೇ ಹಾನಿ ಸಂಭವಿಸಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com