ನಿಮ್ಮ ಕಣ್ಣಿಗೆ ಎಲ್ಲಾ ಪುರುಷರು ರೇಪಿಸ್ಟ್ ಗಳಂತೆ ಕಾಣುತ್ತಾರೆಯೇ?: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಪ್ರಶ್ನೆ 

ನಮ್ಮ ದೇಶದಲ್ಲಿರುವ ಎಲ್ಲಾ ಪುರುಷರು ನಿಮ್ಮ ಕಣ್ಣಲ್ಲಿ ಅತ್ಯಾಚಾರಿಗಳೆಂದು ಕಾಣುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಸ್ಮೃತಿ ಇರಾನಿ
ಸ್ಮೃತಿ ಇರಾನಿ

ನವದೆಹಲಿ: ನಮ್ಮ ದೇಶದಲ್ಲಿರುವ ಎಲ್ಲಾ ಪುರುಷರು ನಿಮ್ಮ ಕಣ್ಣಲ್ಲಿ ಅತ್ಯಾಚಾರಿಗಳೆಂದು ಕಾಣುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದೇ ಮೊದಲ ಬಾರಿಗೆ ದೇಶದ ಇತಿಹಾಸದಲ್ಲಿ ಗಾಂಧಿ ಕುಟುಂಬದ ವ್ಯಕ್ತಿಯೊಬ್ಬರು ಭಾರತದಲ್ಲಿ ಮಹಿಳೆಯರನ್ನು ಅತ್ಯಾಚಾರಗೈಯುವ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ ವಿಷಯವನ್ನು ರಾಹುಲ್ ಗಾಂಧಿ ರಾಜಕೀಯಗೊಳಿಸುತ್ತಿದ್ದಾರೆ. ಭಾರತದ ಮಹಿಳೆಯರು ಅವರಿಗೆ ಸರಿಯಾದ ಉತ್ತರ ನೀಡಲು ಸಮರ್ಥರಾಗಿದ್ದಾರೆ. ಭಾರತದಲ್ಲಿರುವ ಎಲ್ಲಾ ಪುರುಷರು ಅವರ ಕಣ್ಣಿಗೆ ರೇಪಿಸ್ಟ್ ಗಳಂತೆ ಕಾಣುತ್ತಾರೆಯೇ ಎಂದು ಸಂಸತ್ತು ಭವನದ ಹೊರಗೆ ಸುದ್ದಿಗಾರರರೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದರು.


ಮಹಿಳೆಯರ ವಿರುದ್ಧದ ಹಿಂಸೆ ಮತ್ತು ಅತ್ಯಾಚಾರವನ್ನು ರಾಜಕೀಯಗೊಳಿಸಬಾರದು. ಅತ್ಯಾಚಾರ ಮಾಡಿದವರನ್ನು ಸುಮ್ಮನೆ ಬಿಡಬೇಕು ಎಂದು ಯಾರೂ ಹೇಳುವುದಿಲ್ಲ ಎಂದು ಸ್ಮೃತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com