18 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಸಿಮಿ ಉಗ್ರನ ಬಂಧನ

ಹದಿನೆಂಟು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರಿಗೆ ಬೇಕಿದ್ದ ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ಕೊನೆಗೂ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಹದಿನೆಂಟು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರಿಗೆ ಬೇಕಿದ್ದ ನಿಷೇಧಿತ ಸಿಮಿ ಸಂಘಟನೆಯ ಉಗ್ರನನ್ನು ಕೊನೆಗೂ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿ ವಿಶೇಷ ಪೊಲೀಸ್ ಪಡೆ ಹಾಗೂ ಮುಂಬೈಯ ಭಯೋತ್ಪಾದನ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಮಿ ಉಗ್ರ ಇಲ್ಯಾಸ್ ದೆಹಲಿ ಹಾಗೂ ಮಹಾರಾಷ್ಟ್ರ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಮುಂಬೈ ಎಟಿಎಸ್ ಮತ್ತು ದೆಹಲಿ ಸ್ಪೆಷಲ್ ಸೆಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದೆಹಲಿಯ ಶಾಹಿನ್ ಬಾಗ್ ನಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಉಗ್ರ ಇಲ್ಯಾಸ್ ಕುರಿತು ಮಹತ್ವದ ಸಾಕ್ಷ್ಯ ಲಭ್ಯವಾಗಿತ್ತು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

ಪ್ರಸ್ತುತ ಇಲ್ಯಾಸ್ ನನ್ನು ಮೂರು ದಿನಗಳ ಕಾಲ ಮುಂಬೈ ಎಟಿಎಸ್ ಗೆ ಒಪ್ಪಿಸಲಾಗಿದೆ. ಇನ್ನು ಇಲ್ಯಾಸ್ ಸಹೋದರ ಸಂಬಂಧಿ ಅಬ್ಗುಲ್ ಸುಭಾನ್ ಖುರೇಷಿ ಕೂಡ ಇಂಡಿಯನ್ ಮುಜಾಹಿದ್ದೀನ್ ಉಗ್ರಗಾಮಿಯಾಗಿದ್ದು, 2018ರಿಂದ ಈತ ದೆಹಲಿ ಪೊಲೀಸರ ವಶದಲ್ಲಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com