ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಮುಂದುವರೆದ ಪ್ರಕ್ಷುಬ್ಧ ಸ್ಥಿತಿ, ತನ್ನ ನಾಗರೀಕರಿಗೆ ಅಮೆರಿಕಾ, ಕೆನಡಾ ಎಚ್ಚರಿಕೆ

ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಿರುವ ಹಾಗೂ ಈಶಾನ್ಯ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿರುವ ತನ್ನ ನಾಗರೀಕರಿಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕಾ, ಲಂಡನ್, ಕೆನಡಾ, ಫ್ರಾನ್ಸ್ ರಾಷ್ಟ್ರಗಳು ಸಂದೇಶ ರವಾನಿಸಿವೆ. 

Published: 14th December 2019 12:36 PM  |   Last Updated: 14th December 2019 12:36 PM   |  A+A-


Anti-citizenship act protests

ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಮುಂದುವರೆದ ಪ್ರಕ್ಷುಬ್ಧ ಸ್ಥಿತಿ

Posted By : Manjula VN
Source : The New Indian Express

ನವದೆಹಲಿ: ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಿರುವ ಹಾಗೂ ಈಶಾನ್ಯ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿರುವ ತನ್ನ ನಾಗರೀಕರಿಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕಾ, ಲಂಡನ್, ಕೆನಡಾ, ಫ್ರಾನ್ಸ್ ರಾಷ್ಟ್ರಗಳು ಸಂದೇಶ ರವಾನಿಸಿವೆ. 

ಪೌರತ್ವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಪ್ಪಿಗೆ ನೀಡಿದ ಬಳಿಕ ಮಸೂದೆ ಕುರಿತು ನಡೆಯುತ್ತಿದ್ದ ಹೋರಾಟ ಇದೀಗ ಹಿಂಸಾಚಾರ ರೂ ಪಡೆದುಕೊಂಡಿದೆ. ಅಸ್ಸಾಂ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಡಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. 

ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ ಭಾರತ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಪ್ರಮುಖವಾಗಿ ಅಸ್ಸಾಂ ಹಾಗೂ ತ್ರಿಪುರದಲ್ಲಿ ಪ್ರತಿಭಟನೆ ಹಿಂಸಾ ರೂಪ ಪಡೆದುಕೊಂಡಿದೆ. ಗುವಾಹಟಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಭಾರತದ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಲು ಚಿಂತನೆ ನಡೆಸಿರುವವರು ಎಚ್ಚರಿಕೆವಹಿಸಿ. ಸ್ಥಳೀಯ ಮಾಧ್ಯಮಗಳು ಹಾಗೂ ಮಾಹಿತಿಗಳನ್ನು ಅನುಸರಿಸಿ. ಸ್ಥಳೀಯ ಅಧಿಕಾರಿಗಳ ಸೂಚನೆ ಪಾಲನೆ ಮಾಡಿ ಎಂದು ಲಂಡನ್ ತನ್ನ ನಾಗರೀಕರಿಗೆ ಸಂದೇಶ ರವಾನಿಸಿದೆ. 

ಇದರಂತೆ ಅಮೆರಿಕಾ ರಾಯಭಾರಿ ಕಚೇರಿ ಕೂಡ ತನ್ನ ನಾಗರೀಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಭಾರತದ ಈಶಾನ್ಯ ರಾಜ್ಯಗಳಲ್ಲಿರುವ ಪ್ರಜೆಗಳು ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಲು ಸಿದ್ಧರಿರವವರು ಸಾಧ್ಯವಾದಷ್ಟು ನಿಯಂತ್ರಿಸುವುದು ಒಳ್ಳೆಯದು ಎಂದು ತಿಳಿಸಿದೆ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ. 

ಎನ್ಆರ್'ಸಿಗೂ ಪೌರತ್ವ ತಿದ್ದುಪಡಿ ಮಸೂದೆಗೂ ವ್ಯತ್ಯಾಸವೇನು?
ಅಸ್ಸಾಂನಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರ ಪತ್ತೆಯಾಗಿ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್'ಸಿ)ಯನ್ನು ಜಾರಿ ಮಾಡಲಾಗಿತ್ತು. ಆದರ ಪ್ರಕಾರ ಅಲ್ಲಿನ ಜನರು ತಾವು ಅಥವಾ ತಮ್ಮ ಪೂರ್ವಜರು ಅಸ್ಸಾಂ ನಿವಾಸಿಗಳೆಂದು ಸಾಬೀತುಪಡಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, 19 ಲಕ್ಷ ಜನರನ್ನು ಅಕ್ರಮ ವಲಸಿಗರೆಂದು ಗುರುತಿಸಲಾಗಿದೆ. ಆದರೆ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡಲಾಗುತ್ತದೆ. 

Stay up to date on all the latest ರಾಷ್ಟ್ರೀಯ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp