ಆಂಧ್ರದ ದಿಶಾ ಕಾಯ್ದೆ ದೇಶಾದ್ಯಂತ ಜಾರಿಗೊಳಿಸುವಂತೆ ಪ್ರಧಾನಿಗೆ ಪತ್ರ ಬರೆದ ಡಿಸಿಡಬ್ಲ್ಯು ಅಧ್ಯಕ್ಷೆ
ಮಹಿಳೆಯರ ಮೇಲಿನ ಅತ್ಯಾಚಾರ, ಆಸಿಡ್ ದಾಳಿ ಮತ್ತಿತರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ನಂತರ 21 ದಿನಗಳಲ್ಲಿಯೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಆಂಧ್ರ ಪ್ರದೇಶದ ದಿಶಾ ಕಾಯ್ದೆ ದೇಶಾದ್ಯಂತ...
Published: 14th December 2019 05:03 PM | Last Updated: 14th December 2019 05:03 PM | A+A A-

ಸ್ವಾತಿ ಮಲಿವಾಲ್
ನವದೆಹಲಿ: ಮಹಿಳೆಯರ ಮೇಲಿನ ಅತ್ಯಾಚಾರ, ಆಸಿಡ್ ದಾಳಿ ಮತ್ತಿತರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ನಂತರ 21 ದಿನಗಳಲ್ಲಿಯೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಆಂಧ್ರ ಪ್ರದೇಶದ ದಿಶಾ ಕಾಯ್ದೆ ದೇಶಾದ್ಯಂತ ಜಾರಿಗೊಳಿಸುವಂತೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಮಹಿಳಾ ಸುರಕ್ಷತೆಯ ವಿಷಯದಲ್ಲಿ ಕೇಂದ್ರ ಸರ್ಕಾರದ "ಅಸಡ್ಡೆ ವರ್ತನೆ" ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ, ದೇಶಾದ್ಯಂತ ದಿಶಾ ಕಾಯ್ದೆ ಜಾರಿಗೊಳಿಸುವವರೆಗೆ ಉಪವಾಸ ಸತ್ಯಾಗ್ರಹ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಸ್ವಾತಿ ಮಲಿವಾಲ್ ಅವರು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕಳೆದ 10 ದಿನಗಳಿಂದ ಉಪವಾಸ ನಡೆಸುತ್ತಿದ್ದಾರೆ.
ಕಳೆದ ಶುಕ್ರವಾರ ಆಂಧ್ರ ಪ್ರದೇಶ ವಿಧಾನಸಭೆ ದಿಶಾ (ಆಂಧ್ರಪ್ರದೇಶ ಅಪರಾಧ ಕಾನೂನು( ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದ್ದು, ಮಹಿಳೆಯರ ಮೇಲೆ ಅತ್ಯಾಚಾರ, ಆಸಿಡ್ ದಾಳಿ ಮತ್ತಿತರ ಹೀನ ಕೃತ್ಯಗಳು ನಡೆದ 14 ದಿನಗಳಲ್ಲಿಯೇ ವೇಗವಾಗಿ ವಿಚಾರಣೆ ನಡೆಸಿ, ಘಟನೆ ನಡೆದ 21 ದಿನಗಳಲ್ಲೇ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ.