ಇಬ್ಬಗೆಯ ನೀತಿ: ಶಿವಸೇನೆ ಬೆಂಬಲಿಸುತ್ತಿರುವ ಕಾಂಗ್ರೆಸ್ ವಿರುದ್ಧ ಮಾಯಾವತಿ ವಾಗ್ದಾಳಿ 

ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಬೆಂಬಲಿಸಿದಲ್ಲದೇ,  ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿರುವ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಎಸ್ಪಿ ನಾಯಕಿ ಮಾಯಾವತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಯಾವತಿ
ಮಾಯಾವತಿ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಬೆಂಬಲಿಸಿದಲ್ಲದೇ,  ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನು ವಿರೋಧಿಸಿರುವ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಎಸ್ಪಿ ನಾಯಕಿ ಮಾಯಾವತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 ಶಿವಸೇನಾ ಈಗಲೂ ಕೂಡಾ ತನ್ನ ಅಜೆಂಡಾಕ್ಕೆ ಬದ್ಧವಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆಗೆ ಕೇಂದ್ರಸರ್ಕಾರಕ್ಕೆ ಬೆಂಬಲ ನೀಡಿದೆ. ಇದೀಗ ಸಾರ್ವಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ. ಆದರೆ, ಮಹಾರಾಷ್ಟ್ರದಲ್ಲಿ ಶಿವಸೇನೆಯನ್ನು ಕಾಂಗ್ರೆಸ್ ಬೆಂಬಲಿಸಿದೆ. ಇದು ಕಾಂಗ್ರೆಸ್ ಪಕ್ಷದ ಇಬ್ಬಗೆಯ ನೀತಿ ಅಲ್ಲವೇ ಎಂದು ಮಾಯಾವತಿ ಪ್ರಶ್ನಿಸಿದ್ದಾರೆ. ಈ ವಿಚಾರಗಳ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಸರಣಿ ಟ್ವೀಟ್ ಮಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಸ್ಪಷ್ಟಪಡಿಸಬೇಕಾಗಿದೆ. ಇಲ್ಲವಾದರೆ , ತನ್ನ ಪಕ್ಷದ ದುರ್ಬಲತೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹದ್ದೊಂದು ನಾಟಕವಾಡುತ್ತಿದೆ ಎಂಬುದಾಗಿ ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ.

'ನನ್ನ ಹೆಸರು ರಾಹುಲ್ ಸಾರ್ವಕರ್ ಅಳ್ಲ, ರಾಹುಲ್ ಗಾಂಧಿ, ಸತ್ಯ ಹೇಳಿದ್ದಕ್ಕೆ ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ ಬೆನ್ನಲ್ಲೇ ಮಾಯಾವತಿ ಈ ರೀತಿಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ ನಂತರ ಪ್ರತಿಕ್ರಿಯಿಸಿದ ಶಿವಸೇನಾ ಮುಖಂಡ ಸಂಜಯ್ ರಾವತ್, ನಾವು ಪಂಡಿತ್ ನೆಹರು ಹಾಗೂ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ನೀಡುತ್ತೇವೆ. ನೀವು ಸಾರ್ವಕರ್ ಅವರನ್ನು ಅಮಾನಿಸಬೇಡಿ ಎಂದು ಹೇಳಿಕೆ ನೀಡಿದ್ದರು.

ಪೌರತ್ವ ( ತಿದ್ದುಪಡಿ) ಕಾಯ್ದೆ ಮೇಲಿನ ಮತದಾನದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಶಿವಸೇನೆ ಸಭಾತ್ಯಾಗ ನಡೆಸಿತ್ತು. ಆದರೆ, ಲೋಕಸಭೆಯಲ್ಲಿ  ಬೆಂಬಲ ವ್ಯಕ್ತಪಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com