ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು: ಸಿಎಂ ಸರ್ಬಾನಂದ ಸೋನೋವಾಲ್

ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

Published: 15th December 2019 11:38 AM  |   Last Updated: 15th December 2019 11:38 AM   |  A+A-


CM Sarbananda Sonowal

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಗುವಾಹತಿ: ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮತ್ತು ಹಿಂಸಾಚಾರ ಉಲ್ಬಣಿಸಿರುವಂತೆಯೇ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರ ಮುಂದುವರೆದಿರುವಂತೆಯೇ ಇತ್ತ ಸಿಎಂ ಸರ್ಬಾನಂದ ಸೋನೋವಾಲ್ ಅವರು, 'ನಿಜವಾದ ಭಾರತೀಯ ನಾಗರಿಕರನ್ನು ರಕ್ಷಿಸುವ ಹೊಣೆ ನಮ್ಮದು ಎಂದು ಹೇಳಿದ್ದಾರೆ. ಅಲ್ಲದೆ ನೈಜ ಅಸ್ಸಾಂ ನಾಗರಿಕರ ಹಕ್ಕುಗಳಿಗೆ ಮಸೂದೆಯಿಂದ ಯಾವುದೇ ಧಕ್ಕೆ ಇಲ್ಲ. ಆದರೆ ಮಸೂದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುತ್ತಿದ್ದಾರೆ. ಇಂತಹವರಿಂದ ಶಾಂತಿಭಂಗವಾಗುತ್ತಿದ್ದು, ಅಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಮುಂದುವರೆದ ಪ್ರತಿಭಟನೆ
ಇನ್ನು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಹಲವೆಡೆ ಹಿಂಸಾಚಾರ ನಡೆದಿದ್ದು, ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಚಾಲಕ ಮೃತಪಟ್ಟಿದ್ದಾನೆ. ಇಂಟರ್ನೆಟ್‌ ಸೇವೆ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ. ಇನ್ನು ಮೇಘಾಲಯದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದಾರೆ. ಐದು ರೈಲುಗಳು, 15 ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ರಾಜ್ಯದ ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಡಿಸೆಂಬರ್ 19ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು 60 ಸಂಘಟನೆಗಳು ಕರೆ ನೀಡಿವೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp