ದೆಹಲಿಯಲ್ಲೂ ಹೊತ್ತಿಕೊಂಡ ಪೌರತ್ವ ಕಿಚ್ಚು: ಬಂಧನಕ್ಕೊಳಗಾಗಿದ್ದ 50 ವಿದ್ಯಾರ್ಥಿಗಳ ಬಿಡುಗಡೆ- ದೆಹಲಿ ಪೊಲೀಸರು

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ವೇಳೆ 50 ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ನಂತರ ಎಲ್ಲಾ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. 
ದೆಹಲಿಯಲ್ಲೂ ಹೊತ್ತಿಕೊಂಡ ಪೌರತ್ವ ಕಿಚ್ಚು
ದೆಹಲಿಯಲ್ಲೂ ಹೊತ್ತಿಕೊಂಡ ಪೌರತ್ವ ಕಿಚ್ಚು

ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ವೇಳೆ 50 ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ನಂತರ ಎಲ್ಲಾ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದ್ದ ಹಿಂಸಾತ್ಮಕ ಹೋರಾಟ ತಣ್ಣಗಾದ ಬೆನ್ನಲ್ಲೇ, ಇತ್ತ ದೆಹಲಿ ಮತ್ತು ಉತ್ತರಪ್ರದೇಶದ ಅಲಿಗಢದಲ್ಲಿ ಭಾನುವಾರ ಹಿಂಸಾಚಾರ ಭುಗಿಲೆದ್ದಿತ್ತು. 

ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. 4 ಬಸ್, 2 ಅಗ್ನಿಶಾಮಕ ವಾಹನಗಳಿಗೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೇ, ಪೊಲೀಸರ ಮೇಲೂ ದಾಳಿ ನಡೆಸಲಾಗಿದೆ. ಈ ವೇಳೆ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರು ನಡೆಸಿದ ಲಾಠಿಚಾರ್ಜ್ ನಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 

ಹಿಂಸಾಚಾರದ ವೇಳೆ ಭಾಗಿಯಾಗಿದ್ದ 50 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಂದು ಬೆಳಿಗ್ಗೆ ಬಿಡುಗಡೆ ಮಾಡಿದ್ದಾರೆ. ವಶಕ್ಕೆ ಪಡೆದಿದ್ದ 50 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿಗಳನ್ನು ಕಲ್ಕಾಜಿ ಪೊಲೀಸ್ ಠಾಣೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇನ್ನುಳಿದ 15 ಮಂದಿ ವಿದ್ಯಾರ್ಥಿಗಳನ್ನು ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. 

ಕಳೆದ ರಾತ್ರಿಯಷ್ಟೇ ದೆಹಲಿ ಅಲ್ಪಸಂಖ್ಯಾತ ಆಯೋಗ ಕಲ್ಕಾಜಿ ಪೊಲೀಸ್ ಠಾಣಾಧಿಕಾರಿಗಳಿಗೆ ನಿರ್ದೇಶನವೊಂದನ್ನು ನೀಡಿತ್ತು. ಹಿಂಸಾಚಾರದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕೆಂದು ಆಗ್ರಹಿಸಿತ್ತು. ಅಲ್ಲದೆ, ಮೂರುಗಂಟೆಯೊಳಗಾಗಿ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com