ರಾಹುಲ್ 'ರೇಪ್ ಇನ್ ಇಂಡಿಯಾ' ಹೇಳಿಕೆ: ವರದಿ ಕೇಳಿದ ಚುನಾವಣಾ ಆಯೋಗ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರೇಪ್ ಇನ್ ಇಂಡಿಯಾ ಹೇಳಿಕೆ ಕುರಿತಂತೆ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಕೇಂದ್ರೀಯ ಚುನಾವಣಾ ಆಯೋಗ ಸೂಚನೆ ನೀಡಿದೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರೇಪ್ ಇನ್ ಇಂಡಿಯಾ ಹೇಳಿಕೆ ಕುರಿತಂತೆ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಕೇಂದ್ರೀಯ ಚುನಾವಣಾ ಆಯೋಗ ಸೂಚನೆ ನೀಡಿದೆ. 

ಕೆಲ ದಿನಗಳ ಹಿಂದಷ್ಟೇ ಚುನಾವಣಾ ಪ್ರಚಾರ ಹಿನ್ನಲೆಯಲ್ಲಿ ಜಾರ್ಖಾಂಡ್ ನಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿಯವರು ಮೇಕ್ ಇನ್ ಇಂಡಿಯಾ ಅಲ್ಲ, ರೇಪ್ ಅನ್ ಇಂಡಿಯಾ ಎಂದು ಮೋದಿ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. 

ರಾಹುಲ್ ಹೇಳಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಹುಲ್ ಅವರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಮ್ಮ ರಾಜಕೀಯ ಗಾಳಕ್ಕೆ ಬಳಸಿಕೊಳ್ಳುತ್ತಿದ್ದಾರೆಂದು ಸಚಿವೆ ಸ್ಮೃತಿ ಇರಾನಿಯವರು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ, ಹೇಳಿಕೆ ಸಂಬಂಧ ಶೀಘ್ರಗತಿಯಲ್ಲಿ ವಾಸ್ತವಿಕ ವರದಿ ಸಲ್ಲಿಸುವಂತೆ ಜಾರ್ಖಾಂಡ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com