ಅಯೋಧ್ಯೆಯಲ್ಲಿ 4 ತಿಂಗಳೊಳಗೆ ಭವ್ಯ ರಾಮಮಂದಿರ ನಿರ್ಮಾಣ: ಅಮಿತ್ ಶಾ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಂದಿನ ನಾಲ್ಕು ತಿಂಗಳೊಳಗೆ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಂದಿನ ನಾಲ್ಕು ತಿಂಗಳೊಳಗೆ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.

ಜಾರ್ಖಂಡ್ ನ ಪಾಕೂರ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿದೆ. ಇನ್ನುಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ವಿಳಂಬಕ್ಕೆ ಸಕಾಲಿಕ ಕಾರಣಗಳಿಲ್ಲ ಎಂದರು.

ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೆಂಬುದು ಶತಮಾನಗಳಿಂದ ಭಾರತೀಯರ ಬೇಡಿಕೆಯಾಗಿತ್ತು, ಕನಸಾಗಿತ್ತು. ಆದರೆ ಈ ಪ್ರಕರಣ ಕಾಂಗ್ರೆಸ್ ನಿಂದಾಗಿ ವಿಳಂಬವಾಯಿತು. ಅಯೋಧ್ಯೆ ವಿವಾದ ಪ್ರಕರಣವನ್ನು ಶೀಘ್ರ ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿದ್ದು ಪಕ್ಷದ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದೂ ಅವರು ದೂರಿದರು.

ಸುಪ್ರೀಂಕೋರ್ಟ್ ರಾಮಮಂದಿರ ನಿರ್ಮಾಣ ಮಾಡಲು ಹಸಿರು ನಿಶಾನೆ ತೋರಿ ಆದೇಶ ನೀಡಿದ ದಿನದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸುವ ಭರವಸೆ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com