ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ನಾವು, ಕ್ರೆಡಿಟ್ ಯಾವುದೇ ಒಂದು ಪಕ್ಷಕ್ಕೆ ಹೋಗಬಾರದು- ಶಿವಸೇನೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ಶಿವಸೇನೆ.  ಹಾಗಾಗೀ ಮಂದಿರ ನಿರ್ಮಾಣದ ಕ್ರೆಡಿಟ್ ಯಾವುದೇ ಒಂದು ಪಕ್ಷಕ್ಕೆ ಹೋಗಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರವಾತ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ಶಿವಸೇನೆ.  ಹಾಗಾಗೀ ಮಂದಿರ ನಿರ್ಮಾಣದ ಕ್ರೆಡಿಟ್ ಯಾವುದೇ ಒಂದು ಪಕ್ಷಕ್ಕೆ ಹೋಗಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರವಾತ್ ಹೇಳಿದ್ದಾರೆ.

ವಿಶ್ವದಾದ್ಯಂತ ಇರುವ ಭಾರತೀಯರ ಹಾರೈಕೆಯಿಂದಾಗಿ ನಾಲ್ಕು ತಿಂಗಳೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹೇಳಿಕೆ ಬೆನ್ನಲ್ಲೇ ಸಂಜಯ್ ರಾವತ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವರ ಹೇಳಿಕೆ ಕುರಿತಂತೆ ಮಹಾರಾಷ್ಟ್ರ ವಿಧಾನ ಭವನ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್,  ಅಮತ್ ಶಾ ಹೇಳಿರುವುದು ಸತ್ಯ. ರಾಮ ಮಂದಿರ ಖಂಡಿತವಾಗಿ ನಿರ್ಮಾಣವಾಗಲಿದೆ. ಆದರೆ, ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ಶಿವಸೇನೆ ಎಂದರು.
 
ರಾಮ ಮಂದಿರ ನಿರ್ಮಾಣದ ಕ್ರೆಡಿಟ್ ಒಂದು ವೇಳೆ ಬಿಜೆಪಿಗೆ ಹೋದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಹೆಚ್ ಪಿ, ಸಾಧು, ಸಂತರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಕೋಟ್ಯಾಂತರ, ಲಕ್ಷಾಂತರ ಕರಸೇವಕರಿಗೆ ಕ್ರೆಡಿಟ್ ಸಲ್ಲಬೇಕಾಗುತ್ತದೆ. ಯಾವುದೇ ಒಂದು ಪಕ್ಷಕ್ಕೆ ಸೇರಬಾರದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com