ಪೌರತ್ವ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ- ಉದ್ಧವ್ ಠಾಕ್ರೆ

ಪೌರತ್ವ ( ತಿದ್ದುಪಡಿ) ಕಾಯ್ದೆ 2019ರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ: ಪೌರತ್ವ ( ತಿದ್ದುಪಡಿ) ಕಾಯ್ದೆ 2019ರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ನಾಗಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಲೋಕಸಭೆಯಲ್ಲಿ ನಾವು ಪ್ರಶ್ನೆ ಮಾಡಿದ್ದೇವು. ಆದರೆ, ಯಾವುದೇ ಉತ್ತರ ದೊರೆಯಲಿಲ್ಲ. ಈ ಕಾಯ್ದೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಎಂದರು.

ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನದಿಂದ ಡಿಸೆಂಬರ್ 31, 2014ಕ್ಕೂ ಮುಂಚೆ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ಭಾರತದ ಪೌರತ್ವ ಒದಗಿಸುವ ನಿಟ್ಟಿನಲ್ಲಿ  ಪೌರತ್ವ ಕಾಯ್ದೆ ಅನುಷ್ಠಾನಕ್ಕೆ ಬಂದಿದೆ.

ಇಂತಹ ಎಷ್ಟು ಮಂದಿ ವಲಸೆಗರು ಭಾರತಕ್ಕೆ ಬಂದಿದ್ದಾರೆ ಹಾಗೂ ಎಲ್ಲಿಂದ ಅವರು ಬಂದರು,ಭಾರತಕ್ಕೆ ಬಂದ ನಂತರ ಏಲ್ಲಿ ವಾಸ್ತವ್ಯ ಹೂಡಿದರು  ಎಂಬುದರ ಬಗ್ಗೆ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸ್ಪಷ್ಟತೆ ಇಲ್ಲ ಎಂದು ಉದ್ಧವ್ ಠಾಕ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com