ಬಿಎಸ್‌ಪಿ ನಿಯೋಗದಿಂದ ರಾಷ್ಟ್ರಪತಿ ಭೇಟಿ, ಅಸಂವಿಧಾನಿಕ ಸಿಎಎ ಹಿಂಪಡೆಯಲು ಒತ್ತಾಯ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು 12 ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಬುಧವಾರ ರಾಷ್ಟ್ರಪತಿಯನ್ನು
ಡ್ಯಾನಿಶ್ ಅಲಿ
ಡ್ಯಾನಿಶ್ ಅಲಿ

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು 12 ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಬುಧವಾರ ರಾಷ್ಟ್ರಪತಿಯನ್ನು ಭೇಟಿಯಾಗಿ ಕಾಯ್ದೆಯನ್ನು ಹಿಂಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದೆ.

ಬಿಎಸ್‌ಪಿ ಹಿರಿಯ ನಾಯಕ ಸತೀಶ್ ಚಂದ್ರ ಮಿಶ್ರಾ ಮತ್ತು ಲೋಕಸಭಾ ಸದಸ್ಯ ಡ್ಯಾನಿಶ್ ಅಲಿ ನೇತೃತ್ವದ ಬಿಎಸ್‌ಪಿ ನಿಯೋಗವು ರಾಷ್ಟ್ರಪತಿಯನ್ನು ಭೇಟಿ ಮಾಡಿ, ದೇಶಾದ್ಯಂತ ಅಮಾಯಕ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಮನವಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮುನ್ನುಡಿ ಹಾಗೂ ವಿಧಿ 14 ಮತ್ತು 21 ರ ಉಲ್ಲಂಘನೆಯಾಗಿದೆ ಎಂದು ನಾವು ರಾಷ್ಟ್ರಪತಿಗೆ ತಿಳಿಸಿದ್ದೇವೆ. ಅದನ್ನು ಹಿಂಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ನಾವು ವಿನಂತಿಸಿದ್ದೇವೆ ಎಂದು ಮಿಶ್ರಾ ಅವರು ರಾಷ್ಟ್ರಪತಿಗಳ ಭೇಟಿ ಬಳಿಕ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com