ಎನ್ ಆರ್ ಸಿ ಒಪ್ಪಿಕೊಳ್ಳಲ್ಲ, ಶಾಂತಿ ಕಾಪಾಡಿ: ರಾಜ್ಯದ ಜನತೆಗೆ ಒಡಿಶಾ ಸಿಎಂ ಮನವಿ

ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಂಡು, ಜಾತ್ಯತೀತ ನಿಲುವು ಪ್ರಕಟಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಿಜು ಜನತಾ ದಳ ವಿವಾದಾತ್ಮಕ ರಾಷ್ಟ್ರೀಯ ಪೌರತ್ವ ನೋಂದಣಿ...
ನವೀನ್ ಪಟ್ನಾಯಕ್
ನವೀನ್ ಪಟ್ನಾಯಕ್

ಭುವನೇಶ್ವರ: ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಮಾನ ಅಂತರ ಕಾಯ್ದುಕೊಂಡು, ಜಾತ್ಯತೀತ ನಿಲುವು ಪ್ರಕಟಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಿಜು ಜನತಾ ದಳ ವಿವಾದಾತ್ಮಕ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ)ಯನ್ನು ಬೆಂಬಲಿಸುವುದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಎನ್ ಆರ್ ಸಿಯನ್ನು ಬೆಂಬಲಿಸುವುದಿಲ್ಲ. ಈ ಕುರಿತು ಬಿಜೆಡಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತನ್ನ ನಿಲುವು ಸ್ಪಷ್ಟಪಡಿಸಿದೆ ಎಂದು ನವೀನ್ ಪಟ್ನಾಯಕ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಸಿಎಂ, ಪೌರತ್ವ ಕಾಯ್ದೆಯಿಂದ ಭಾರತೀಯರಿಗೆ ಯಾವುದೇ ಸಮಸ್ಯೆ ಇಲ್ಲ. ಅದು ಕೇವಲ ವಿದೇಶಿಗರಿಗೆ ಮಾತ್ರ ಅನ್ವಯಿಸುತ್ತದೆ ಎಂದರು.

ಪೌರತ್ವ ಕಾಯ್ದೆ ವಿರೋಧಿಸಿ ಒಡಿಶಾದಲ್ಲೂ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸುತ್ತಿದ್ದು, ಎನ್ ಆರ್ ಸಿ ಕುರಿತು ಮುಖ್ಯಮಂತ್ರಿಗಳು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ನವೀನ್ ಪಟ್ನಾಯಕ್ ಅವರು ಇಂದು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಿಜೆಡಿ ಪೌರತ್ವ ಮಸೂದೆಯನ್ನು ಬೆಂಬಲಿಸಿದ ನಂತರ ಎನ್ ಆರ್ ಸಿ ಕುರಿತು ರಾಜ್ಯ ಸರ್ಕಾರ ತನ್ನ ನಿಲುವನ್ನು ಬಹಿರಂಗವಾಗಿ ಸ್ಪಷ್ಟಪಡಿಸಬೇಕು ಎಂದು ಒಡಿಶಾ ಮುಸ್ಲಿಂ ಸಮುದಾಯ ಒತ್ತಾಯಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com