ಹೊಸ ರೇಷನ್ ಕಾರ್ಡ್ ಮಾದರಿ ಸಿದ್ಧಪಡಿಸಿದ ಕೇಂದ್ರ, ಅದನ್ನು ಅನುಸರಿಸುವಂತೆ ರಾಜ್ಯಗಳಿಗೆ ಸೂಚನೆ

ಒಂದು ದೇಶ ಒಂದು ತೆರಿಗೆ(ಜಿಎಸ್ ಟಿ) ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 'ಒಂದು ದೇಶ, ಒಂದು ಪಡಿತರ ಚೀಟಿ' ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಈ ಸಂಬಂಧ ಹೊಸ ರೇಷನ್ ಕಾರ್ಡ್ ಮಾದರಿಯನ್ನು ಸಿದ್ಧಪಡಿಸಿದೆ. ಅಲ್ಲದೆ ರಾಜ್ಯಗಳು ಸಹ ಹೊಸ ರೇಷನ್ ಕಾರ್ಡ್ ನೀಡುವಾಗ ಈ ಮಾದರಿ ಅನುಸರಿಸುವಂತೆ ಸೂಚಿಸಿದೆ.
ರೇಷನ್ ಕಾರ್ಡ್ ಮಾದರಿ
ರೇಷನ್ ಕಾರ್ಡ್ ಮಾದರಿ

ನವದೆಹಲಿ: ಒಂದು ದೇಶ ಒಂದು ತೆರಿಗೆ(ಜಿಎಸ್ ಟಿ) ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 'ಒಂದು ದೇಶ, ಒಂದು ಪಡಿತರ ಚೀಟಿ' ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಈ ಸಂಬಂಧ ಹೊಸ ರೇಷನ್ ಕಾರ್ಡ್ ಮಾದರಿಯನ್ನು ಸಿದ್ಧಪಡಿಸಿದೆ. ಅಲ್ಲದೆ ರಾಜ್ಯಗಳು ಸಹ ಹೊಸ ರೇಷನ್ ಕಾರ್ಡ್ ನೀಡುವಾಗ ಈ ಮಾದರಿ ಅನುಸರಿಸುವಂತೆ ಸೂಚಿಸಿದೆ.

ಒಂದು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ನಾಗರಿಕರು ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ಪಡಿತರ ಪಡೆಯುವ ‘ಒಂದು ದೇಶ ಒಂದು ಪಡಿತರ ಚೀಟಿ’ಯೋಜನೆಯನ್ನು 2020ರ ಜೂನ್ 1 ರಿಂದ ದೇಶಾದ್ಯಂತ ಜಾರಿಗೆ ತರಲಾಗುತ್ತಿದ್ದು, ಪ್ರಾಯೋಗಿಕವಾಗಿ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಜನವರಿ 1ರಿಂದ ಜಾರಿಗೊಳಿಸಲಾಗುತ್ತಿದೆ.

ಒಂದು ಕುಟುಂಬ ಅಥವಾ ವ್ಯಕ್ತಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಾಸ ಸ್ಥಳ ಬದಲಿಸಿದರೂ ಯಾವ ಬಡವರೂ ಪಿಡಿಎಸ್ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಅಲ್ಲದೆ, ನಕಲಿ ಪಡಿತರ ಚೀಟಿದಾರರನ್ನು ಪಟ್ಟಿಯಿಂದ ಹೊರಹಾಕಲು ಸಹ ಇದು ನೆರವಾಗುತ್ತದೆ.

ಈಗಾಗಲೇ 6 ರಾಜ್ಯಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಇ- ಕೆವೈಸಿ (ಆಧಾರ್ ಆಧಾರಿತ ಬಯೋಮೆಟ್ರಿಕ್) ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ರೂಪಿಸಿರುವ ‘ಐಎಂಪಿಡಿಎಸ್’ (ಇಂಟಿಗ್ರೇಟೆಡ್‌ ಮ್ಯಾನೇಜ್‌ಮೆಂಟ್ ಆಫ್ ಪಿಡಿಎಸ್) ಎಂಬ ಆನ್‌ಲೈನ್ ಡಾಟಾಬೇಸ್‌ ವ್ಯವಸ್ಥೆಯ ಮೂಲಕ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com