ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹಿರಂಗ ಹೇಳಿಕೆ: 'ಸಾವ್ಧಾನ್ ಇಂಡಿಯಾ'ದಿಂದ ನಟ ಸುಶಾಂತ್ ಸಿಂಗ್ ಔಟ್!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ತಮ್ಮ ನೆಚ್ಚಿನ ಕಾರ್ಯಕ್ರಮದಿಂದ ಔಟ್ ಆಗಿದ್ದಾರೆ.

Published: 19th December 2019 02:01 PM  |   Last Updated: 19th December 2019 02:01 PM   |  A+A-


Actor Sushant Singh

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿರುವಂತೆಯೇ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ತಮ್ಮ ನೆಚ್ಚಿನ ಕಾರ್ಯಕ್ರಮದಿಂದ ಔಟ್ ಆಗಿದ್ದಾರೆ.

ಹೌದು.. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಾವ್ ಧಾನ್ ಇಂಡಿಯಾ ಕಾರ್ಯಕ್ರಮದಿಂದ ಸುಶಾಂತ್ ಸಿಂಗ್ ರನ್ನು ಕಾರ್ಯಕ್ರಮದ ಆಡಳಿತ ಮಂಡಳಿ ಕಿತ್ತೊಗೆದಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಸುಶಾಂತ್ ಸಿಂಗ್ 
ಜಾಮಿಯಾ ಲಾಠಿಚಾರ್ಜ್ ಘಟನೆ ಕುರಿತಂತೆ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ ಘಟನೆಯನ್ನು ಖಂಡಿಸಿದ್ದ ಅವರು, ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು, ಪ್ರತಿಭಟನೆಗಳನ್ನು ದಮನಿಸುವ ಕಾರ್ಯ ಸಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತೆಯೇ ಶಾಂತಿಯುತ ಪ್ರತಿಭಟನೆ ನಡೆಸಿ ಎಂದು ಕರೆ ನೀಡಿರುವ ಅವರು ಯಾವುದೇ ಕಾರಣಕ್ಕೂ ಹಿಂಸಾತ್ಮಾಕ ಮಾರ್ಗ ತುಳಿಯದಿರಿ ಎಂದು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp