ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಆಕ್ರೋಶ, ತುರ್ತು ಸಭೆ ಕರೆದ ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ತುರ್ತು ಭದ್ರತಾ ಸಭೆ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ತುರ್ತು ಭದ್ರತಾ ಸಭೆ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅವರ ನಿವಾಸದಲ್ಲೇ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇಂದು ರಾತ್ರಿ 7 ಗಂಟೆಗೆ ನಿಗದಿಯಾಗಿರುವ ಸಭೆಯಲ್ಲಿ ಲಖನೌ ಹಾಗೂ ಸಂಭಲದಲ್ಲಿ ನಡೆದ ಹಿಂಸಾಚಾರ ಸೇರಿದಂತೆ ದೇಶಾದ್ಯಂತ ನಡೆದ ಪ್ರತಿಭಟನೆ ಹಾಗೂ ಭದ್ರತಾ ಸ್ಥಿತಿಗತಿ ಬಗ್ಗೆ ಗೃಹ ಸಚಿವರು ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಈ ಮಧ್ಯೆ, ಪೌರತ್ವ ಕಾಯ್ದೆ ಯಾವುದೇ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ. ಅದು ಕೇವಲ ವಿದೇಶಿಗರಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಈ ಕಾಯ್ದೆ ಯಾವುದೇ ಭಾರತೀಯರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com