ಸಾರ್ವಜನಿಕ ಆಸ್ತಿ ಹಾನಿ ಮಾಡುವ ಪ್ರತಿಭಟನಾಕಾರರ ಆಸ್ತಿ ಜಪ್ತಿ: ಯೋಗಿ ಆದಿತ್ಯನಾಥ್ ಎಚ್ಚರಿಕೆ

ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡುವ ಪ್ರತಿಭಟನಾಕರರ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಚ್ಚರಿಸಿದ್ದಾರೆ.
ಲಖನೌನಲ್ಲಿ ಹಿಂಸಾತ್ಮಕ ಪ್ರತಿಭಟನೆ
ಲಖನೌನಲ್ಲಿ ಹಿಂಸಾತ್ಮಕ ಪ್ರತಿಭಟನೆ

ಲಖನೌ: ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡುವ ಪ್ರತಿಭಟನಾಕರರ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಚ್ಚರಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಖನೌ, ಸಂಭಾಲ ಮತ್ತು ಮಾವೋನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರು ಹಲವು ವಾಹನ, ಪೊಲೀಸ್ ಔಟ್ ಪೋಸ್ಟ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಂತಿ ಕದಡಲು ಯತ್ನಿಸುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ. 

ರಾಜ್ಯದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು ನಾನು ಸಹಿಸುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿರುವವರನ್ನು ಗುರುತಿಸಿ, ಅವರ ಆಸ್ತಿ ಜಪ್ತಿ ಮಾಡಿ, ಹರಾಜು ಹಾಕಲಾಗುವುದು ಎಂದು ಯೋಗಿ ಎಚ್ಚರಿಸಿದ್ದಾರೆ.

ಇಂದು ಲಖನೌನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 50 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ವಾರಣಾಸಿಯಲ್ಲಿ 150 ಮಂದಿ, ಫೆರೋಜಾಬಾದ್ ನಲ್ಲಿ 144 ಮಂದಿ ಹಾಗೂ ಆಗ್ರದಲ್ಲಿ 155 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com