ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಉದ್ಧಟನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಉದ್ಧಟನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್ ಮತ್ತು ಮೆಂಧಾರ್ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದ್ದು, ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ. 

ಅಖನೂರ್ ವಲಯದ ಪಲ್ಲನ್ ವಾಲದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನಕ್ಕೆ ನಿನ್ನೆಯಷ್ಟೇ ದಿಟ್ಟ ಉತ್ತರ ನೀಡಿತ್ತು. ಈ ವೇಳೆ ಇಬ್ಬರು ಪಾಕಿಸ್ತಾನ ಯೋಧರು ಮೃತಪಟ್ಟಿದ್ದರು. ಅವರ ಮೃತದೇಹವನ್ನು ನಿಯಂತ್ರ ರೇಖೆ ಬಳಿ ಪತ್ತೆ ಮಾಡಲಾಗಿದ್ದು, ಬಿಗುವಿನ ವಾತಾವಣ ಇದ್ದಿದ್ದರಿಂದ ಶವ ಪರೀಕ್ಷ ನಡೆಸಲಾಗಿಲ್ಲ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com