ಸಿಎಎ, ಎನ್ಆರ್'ಸಿ ಬಳಿಕ ಎನ್'ಪಿಆರ್'ನತ್ತ ಪ್ರಧಾನಿ ಮೋದಿ ಗುರಿ? 

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ಸಫಲವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಜಾರಿಗೆ ಮುಂದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ಸಫಲವಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಜಾರಿಗೆ ಮುಂದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ರಾಷ್ಟ್ರೀಯ ನಾಗರೀಕ ನೋಂದಣಿ (ಎನ್'ಸಿಆರ್) ಬಗ್ಗೆ ವ್ಯಾಪಕ ವಿರೋಧ ಕಂಡು ಬಂದು ದೇಶದ ವಿವಿಧೆಡೆ ಹಿಂಸಾಚಾರ ನಡೆದಿರುವ ನಡುವೆಯೇ ಮಂಗಳವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎನ್'ಪಿಆರ್ ಬಗ್ಗೆ ಗಹನ ಚರ್ಚೆ ನಡೆಯುವ ಸಾಧ್ಯೆತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಎನ್'ಪಿಆರ್'ಗೆ ಒಪ್ಪಿಗೆ ದೊರೆತರೆ ಇದನ್ನು ಏಪ್ರಿಲ್ 1, 2020ರಿಂದ ಸೆಪ್ಟೆಂಬರ್ 20, 2020ರವರೆಗೆ ಕೈಗೊಳ್ಳುವ ನಿರೀಕ್ಷೆಯಿದೆ. ದೇಶದ ಪ್ರತಿ ಮನೆಗೂ ಗಣತಿದಾರರು ಬಂದು ಜನಸಂಖ್ಯೆ ನೋಂದಣಿ ಮಾಡಲಿದ್ದಾರೆ. ಬಯೋಮೆಟ್ರಿಕ್ ಸಾಧನ ಬಳಸಿ ದೇಶದ ನಿವಾಸಿಗಳ ಗುರುತಿನ ದತ್ತಾಂಶ ಸಂಗ್ರಹಿಸಲಾಗುತ್ತದೆ. 

ಈ ಪ್ರಕ್ರಿಯೆಯ ಮೂಲ ಉದ್ದೇಶವೆಂದರೆ ದೇಶದ ಪ್ರತಿ ನಿವಾಸಿಗಳ ಸಮಗ್ರ ಗುರುತಿನ ದತ್ತಾಂಶಗಳನ್ನು ಸೃಷ್ಟಿಸುವುದಾಗಿದೆ. 

ಎನ್'ಪಿಆರ್ ಅನ್ನು ಮನಮೋಹನ ಸಿಂಗ್ ಸರ್ಕಾರ 2010ರಲ್ಲಿ ಆರಂಭಿಸಿತ್ತು. ಅಂದಿನ ಗೃ ಸಚಿವ ಪಿ.ಚಿದಂಬರಂ ಅವರು ಎನ್'ಪಿಆರ್ ಆರಂಭಿಸಿ ಕರಾವಳಿಯಲ್ಲಿ ನೆಲೆಸಿರುವ ಜನರ ದತ್ತಾಂಶ ಸಂಗ್ರಹಕ್ಕೆ ನಿರ್ಧರಿಸಿದ್ದರು. ಆದರೆ, ನಂತರ ಈ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈಗ ಇದಕ್ಕೆ ಮತ್ತೆ ಚಾಲನೆ ಕೊಟ್ಟು ಕರಾವಳಿಯಷ್ಟೇ ಅಲ್ಲ, ದೇಶವ್ಯಾಪ್ತಿ ಪ್ರಕ್ರಿಯೆನ್ನಾಗಿ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. 

ಏನಿದು ಏನ್'ಪಿಆರ್? 
ದೇಶದ ಜನಗಣತಿಗೆ ಪೂರಕವಾದ ಪ್ರಕ್ರಿಯೆಯೇ ಎನ್'ಪಿಆರ್. ಎನ್'ಪಿಆರ್ ಮೂಲಕ ದೇಸದಲ್ಲಿರುವ ಜನರ ಸಮಗ್ರ ಗುರುತಿನ ತ್ತಾಂಶ ಸಂಗ್ರಹಿಸಲಾಗುತ್ತದೆ. ಬಯೋಮೆಟ್ರಿಕ್ ಯಂತ್ರ ಬಳಸಿ ಜನರ ಗುರುತು ಪಡೆಯಲಾಗುತ್ತದೆ. ದೇಶದ ಯಾವುದೇ ಪ್ರದೇಶದಲ್ಲಿ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಅವಧಿ ವಾಸವಾಗಿರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com