Alert: ಮತ್ತೊಂದು ಬ್ಯಾಂಕ್ ಮುಷ್ಕರಕ್ಕೆ ಸಿದ್ದರಾಗಿ!

ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಒಕ್ಕೂಟಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಒಕ್ಕೂಟಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿವೆ.

ಹೊಸ ವರ್ಷಾರಂಭದಲ್ಲೇ ಬ್ಯಾಂಕ್ ಗ್ರಾಹಕರಿಗೆ ಮುಷ್ಕರದ ಬಿಸಿ ಮುಟ್ಟಲಿದ್ದು, 2020 ರ ಜನವರಿ 8 ರಂದು ಕೇಂದ್ರ ಕಾರ್ಮಿಕ ಸಂಘಗಳು ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿದೆ. ಈ ಕುರಿತಂತೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆ, ಉದ್ಯೋಗ ಸೃಷ್ಟಿ, ಕಾರ್ಮಿಕರ ಮೇಲೆ ಪ್ರತಿಕೂಲ ತಿದ್ದುಪಡಿ ಕಾನೂನುಗಳು ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು 10 ಕೇಂದ್ರ ಕಾರ್ಮಿಕ ಸಂಘಗಳು ಜನವರಿ 8 ರಂದು ರಾಷ್ಟ್ರೀಯ ಸಾಮಾನ್ಯ ಮುಷ್ಕರಕ್ಕೆ ಕರೆ ನೀಡಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಬ್ಯಾಂಕಿಂಗ್ ವಲಯದ ಐದು ಒಕ್ಕೂಟಗಳು ಜಂಟಿಯಾಗಿ ಈ ಮುಷ್ಕರಕ್ಕೆ ಕರೆ ನೀಡಿದ್ದು, ಎಐಬಿಇಎ, ಎಐಬಿಒಎ, ಬಿಇಎಫ್‌ಐ, ಐಎನ್‌ಬಿಇಎಫ್ ಮತ್ತು ಐಎನ್‌ಬಿಒಸಿ ರಾಷ್ಟ್ರೀಯ ಸಾಮಾನ್ಯ ಮುಷ್ಕರದಲ್ಲಿ ಭಾಗವಹಿಸಲು ನಿರ್ಧರಿಸಿವೆ. ಇದಲ್ಲದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ), ಸಹಕಾರಿ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (ಆರ್‌ಆರ್‌ಬಿ), ಭಾರತದ ಜೀವ ವಿಮಾ ನಿಗಮ ಮತ್ತು ಸಾಮಾನ್ಯ ವಿಮಾ ವಲಯದ ನೌಕರರು ಸಹ ಮುಷ್ಕರಕ್ಕೆ ಸೇರುತ್ತಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com