ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ.

ಜಾರ್ಖಂಡ್ ನಲ್ಲಿ ಆಡಳಿತಾ ರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, 81 ಕ್ಷೇತ್ರಗಳ ಪೈಕಿ ಬಿಜೆಪಿ ಕೇಲವ 28 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈಗಗಾಲೇ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ. 

ಉಳಿದಂತೆ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಎಜೆಎಸ್ ಯು ಪಕ್ಷ 6, ಜೆವಿಎಂ7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

81 ಸದಸ್ಯ ಬಲದ ಜಾರ್ಖಂಡ್ ನಲ್ಲಿ ಸರ್ಕಾರ ರಚನೆಗೆ 41 ಸದಸ್ಯ ಬಲದ ಅಗತ್ಯವಿದೆ. ಹೀಗಾಗಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈ ಬಾರಿ ಸರ್ಕಾರ ರಚನೆ ಮಾಡುವುದು ಬಹುತೇಕ ನಿಚ್ಚಳವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com