ದಿಶಾ ಪ್ರಕರಣ; ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿದ ತಂಡ

ದೆಹಲಿಯ ಏಮ್ಸ್ ಆಸ್ಪತ್ರೆಯ ಮೂವರು ವಿಧಿವಿಜ್ಞಾನ ವೈದ್ಯರ ತಂಡ ಸೋಮವಾರ ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ನಾಲ್ಕು ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿತು. 

Published: 23rd December 2019 06:27 PM  |   Last Updated: 23rd December 2019 06:27 PM   |  A+A-


forensic experts from AIIMS conduct second autopsy on accused of Disha case

ದಿಶಾ ಪ್ರಕರಣ; ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿದ ತಂಡ

Posted By : Srinivas Rao BV
Source : UNI

ಹೈದರಾಬಾದ್: ದೆಹಲಿಯ ಏಮ್ಸ್ ಆಸ್ಪತ್ರೆಯ ಮೂವರು ವಿಧಿವಿಜ್ಞಾನ ವೈದ್ಯರ ತಂಡ ಸೋಮವಾರ ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ನಾಲ್ಕು ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿತು. 

ತೆಲಂಗಾಣ ಹೈಕೋರ್ಟ್ ಆದೇಶದ ಮೇರೆಗೆ ಡಾ.ಸುದೀರ್ ಗುಪ್ತ ನೇತೃತ್ವದ  ತಂಡ, ಆರೋಪಿಗಳ ಸಂಬಂಧಿಕರ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿತು. ಸಿಕಂದಾರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ನಡೆದ ಈ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ಮುದ್ರಣ ಮಾಡಲಾಯಿತು. ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು ಎಂದು ಗಾಂಧಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. 

Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp