ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

ಇತ್ತೀಚಿನ ವರದಿಗಳಂತೆ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇತ್ತೀಚಿನ ವರದಿಗಳ ಅನ್ವಯ ಜಾರ್ಖಂಡ್ ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ಅಖಿಲ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್​ಯು) ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com