ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆಗೆ ಕ್ಷಣಗಣನೆ 

ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆಗೆ ಕ್ಷಣಗಣನೆ 

ರಾಂಚಿ: ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.


ಜಾರ್ಖಂಡ್ ನ ಒಟ್ಟು 81 ಸ್ಥಾನಗಳಿಗೆ ಐದು ಹಂತಗಳಲ್ಲಿ ನವೆಂಬರ್ 30ರಿಂದ ಡಿಸೆಂಬರ್ 20ರವರೆಗೆ ಮತದಾನ ನಡೆದಿತ್ತು. ಜಾರ್ಖಂಡ್ ನಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿದ್ದು ಸರ್ಕಾರ ರಚಿಸಲು ಮ್ಯಾಜಿಕ್ ಸಂಖ್ಯೆಗೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳು ಲೆಕ್ಕಾಚಾರದಲ್ಲಿ ತೊಡಗಿವೆ.


ರಾಜ್ಯದಲ್ಲಿ ಪ್ರಮುಖವಾಗಿ ಪೈಪೋಟಿಯಲ್ಲಿರುವ ಎರಡು ಪಕ್ಷಗಳು ಬಿಜೆಪಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನೇತೃತ್ವದ ವಿರೋಧ ಮೈತ್ರಿಕೂಟಗಳು. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 37 ಸೀಟುಗಳನ್ನು ಗೆದ್ದುಕೊಂಡಿದ್ದ ಬಿಜೆಪಿ ಈ ಬಾರಿ 65 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಚುನಾವಣಾ ಘೋಷಣೆಗಳಲ್ಲಿ ಹೇಳುತ್ತಾ ಬಂದಿತ್ತು. ಆದರೆ ಈ ಬಾರಿ ಜೆಎಂಎಂ, ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಮೈತ್ರಿಕೂಟಗಳಿಂದ ಭಾರೀ ಪೈಪೋಟಿ ಎದುರಿಸಲಿದೆ. 


ಕಳೆದ ಬಾರಿ 2014ರಲ್ಲಿ ಎಜೆಎಸ್ ಯು ನೆರವಿನೊಂದಿಗೆ ಬಿಜೆಪಿಯ ರಘುವೀರ್ ದಾಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಈ ಬಾರಿ ಎಜೆಎಸ್ ಯು ಬಿಜೆಪಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com