ಫೇಸ್‌ಬುಕ್‌ನಲ್ಲಿ ಉದ್ಧವ್ ಠಾಕ್ರೆ ವಿರುದ್ಧ ಟೀಕೆ, ಯುವಕನ ತಲೆ ಬೋಳಿಸಿ ಹಲ್ಲೆ ಮಾಡಿದ ಶಿವಸೇನಾ ಕಾರ್ಯಕರ್ತರು
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರು ಯುವಕನೊಬ್ಬನ ತಲೆ ಬೋಳಿಸಿ, ಥಳಿಸಿರುವ ಘಟನೆ ನಡೆದಿದೆ.
Published: 23rd December 2019 11:14 PM | Last Updated: 23rd December 2019 11:14 PM | A+A A-

ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮುಂಬೈ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರು ಯುವಕನೊಬ್ಬನ ತಲೆ ಬೋಳಿಸಿ, ಥಳಿಸಿರುವ ಘಟನೆ ನಡೆದಿದೆ.
ಈ ಸಂಬಂಧ ಹಲ್ಲೆಗೊಳಗಾದ ಯುವಕ ರಾಹುಲ್ ತಿವಾರಿ ವಾಡಾಲಾ ಟ್ರಕ್ ಟರ್ಮಿನಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಫೇಸ್ ಬುಕ್ ನಲ್ಲಿ ಉದ್ದವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಆತ ದೂರಿನಲ್ಲಿ ತಿಳಿಸಿದ್ದಾನೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಕುರಿತು ಉದ್ದವ್ ಠಾಕ್ರೆ ನೀಡಿದ್ದ ಹೇಳಿಕೆಯನ್ನು ಟೀಕಿಸಿದ್ದರಿಂದ ಈ ರೀತಿ ಹಲ್ಲೆ ಮಾಡಲಾಗಿದೆ ಎಂದು ರಾಹುಲ್ ಹೇಳಿದ್ದಾನೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲ್ಲೆಮಾಡಿದವರು ಮತ್ತು ಹಲ್ಲೆಗೊಳಗಾದ ರಾಹುಲ್ ಇಬ್ಬರಿಗೂ ನೋಟಿಸ್ ಕಳುಹಿಸದ್ದಾರೆ.