ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಬಿಜೆಪಿ

ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಂಚಿ: ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.

 ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ. ಜಾರ್ಖಂಡ್ ನಲ್ಲಿ ಆಡಳಿತಾ ರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, 81 ಕ್ಷೇತ್ರಗಳ ಪೈಕಿ ಬಿಜೆಪಿ ಕೇಲವ 28 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಈಗಗಾಲೇ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ. 

ಏತನ್ಮಧ್ಯೆ ಜಾರ್ಖಂಡ್ ನಲ್ಲಿ ಬಿಜೆಪಿ ಹಿನ್ನಡೆಗೆ ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯೇ ಕಾರಣ ಎಂಬ ವಿಶ್ಲೇಷಣೆಗಳ ಕುರಿತು ಬಿಜೆಪಿ ಕಿಡಿಕಾರಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಗೂ ಜಾರ್ಖಂಡ್ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

ಈ ಕುರಿತಂತೆ ಮಾತನಾಡಿದ ಜಾರ್ಖಂಡ್ ಬಿಜೆಪಿ ಘಟಕದ ವಕ್ತಾರ ಸುದೇಶ್ ವರ್ಮಾ ಅವರು, ಎನ್ ಆರ್ ಸಿ ಪ್ರಚಾರದ ವಸ್ತುವಲ್ಲ. ಎನ್ ಆರ್ ಸಿ ಅಥವಾ ಸಿಎಎ ಕುರಿತು ಜಾರ್ಖಂಡ್ ನಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳಾಗಿರಲಿಲ್ಲ. ಹೀಗಾಗಿ ಹಾಲಿ ಚುನಾವಣಾ ಫಲಿತಾಂಶಕ್ಕೂ ಪೌರತ್ವ ಕಾಯ್ದೆಗೂ ತಳುಕುಹಾಕುವುದು ಬೇಡ. ಎನ್ ಆರ್ ಸಿ ವಿಚಾರವಾಗಿ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವ ಎಲ್ಲ ಕೆಲಸಗಳನ್ನೂ ನಾವು ಮಾಡಿದ್ದೇವೆ. ಎನ್ ಆರ್ ಸಿ ಅಥವಾ ಸಿಎಎ ಎಂದೂ ನಮ್ಮ ಚುನಾವಣಾ ವಸ್ತುವಾಗಿರಲಿಲ್ಲ. ರಾಷ್ಟ್ರೀಯ ಹಿತಾಸಕ್ತಿಯಿಂದಾಗಿ ಅದನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com